LATEST NEWS
ಅಪಘಾತದಲ್ಲಿ ಕಟೀಲು ದೇವಸ್ಥಾನದ ಅರ್ಚಕ ಹರಿನಾರಾಯಾಣ ಅಸ್ರಣ್ಣ ಪುತ್ರನ ಸಾವು
ಅಪಘಾತದಲ್ಲಿ ಕಟೀಲು ದೇವಸ್ಥಾನದ ಅರ್ಚಕ ಹರಿನಾರಾಯಾಣ ಅಸ್ರಣ್ಣ ಪುತ್ರನ ಸಾವು
ಬೆಂಗಳೂರು ಜುಲೈ 25: ಕಟೀಲು ದೇವಸ್ಥಾನದ ಅರ್ಚಕ ಹರಿನಾರಾಯಣ ಅಸ್ರಣ್ಣ ಅವರ ಪುತ್ರ ಶ್ರೀನಿಧಿ ಅಸ್ರಣ್ಣ ನಿನ್ನೆ ತಡರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಬೆಂಗಳೂರಿನ ನೆಲಮಂಗಲ ಸಮೀಪ ತಾವರೆಕೆರೆ ಬಳಿ ನಡೆದ ಕಾರು ಅಪಘಾತದಲ್ಲಿ ಇವರಿಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ. ವಿದ್ಯಾರ್ಥಿಗಳು ತುಮಕೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತ ನಡೆದಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತ ಯುವಕರಲ್ಲಿ ಒಬ್ಬರು ಕಟೀಲು ದೇವಸ್ಥಾನದ ಅರ್ಚಕ ಹರಿನಾರಾಯಣ ಅಸ್ರಣ್ಣ ಅವರ ಮಗ ಶ್ರೀನಿಧಿ ಅಸ್ರಣ್ಣ ಹಾಗೂ ಇನ್ನೊಬ್ಬ ಯುವಕನನ್ನು ಕೈಕಂಬ ಶ್ರೀ ರಾಮ್ ಹೋಟೆಲ್ ನ ಹರಿಭಟ್ರ ಮೊಮ್ಮಗ (ಮಗಳ ಮಗ) ಪ್ರಜ್ವಲ್ ಎಂದು ಗುರುತಿಸಲಾಗಿದೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.