Connect with us

    LATEST NEWS

    ಕಾಟಿಪಳ್ಳ ಚೂರಿ ಇರಿತ ಪ್ರಕರಣ – ಮೂವರು ಆರೋಪಿಗಳ ಬಂಧನ

    ಮಂಗಳೂರು ಜನವರಿ 28: ಸುರತ್ಕಲ್ ಕಾಟಿಪಳ್ಳದಲ್ಲಿ ಯುವಕನ ಮೇಲೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತರನ್ನು ಕಾಟಿಪಳ್ಳ ನಿವಾಸಿ ಶ್ರೀನಿವಾಸ(20), ರಾಜು(20) ಹಾಗೂ ಅಭಿಷೇಕ್(18) ಎಂದು ಗುರುತಿಸಲಾಗಿದೆ. ನಿನ್ನೆ ತಡರಾತ್ರಿ  ಕಾಟಿಪಳ್ಳ ನಿವಾಸಿ ತನ್ನ ಸ್ನೇಹಿತನೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ಮತ್ತೊಂದು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬೈಕ್ ಅಡ್ಡಗಟ್ಟಿ ಚೂರಿಯಿಂದ ಇರಿದು ಹತ್ಯೆಗೆ ಯತ್ನಿಸಿದ್ದಾರೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


    ಪ್ರಕರಣವನ್ನು ತ್ವರಿತವಾಗಿ ಇತ್ಯರ್ಥಗೊಳಿಸಿರುವ ಸುರತ್ಕಲ್ ಠಾಣಾ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ವಾಹನ, ಆಯುಧಗಳನ್ನು ವಶಪಡಿಕೊಳ್ಳಲಾಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *