Connect with us

    LATEST NEWS

    ಐಪಿಎಲ್ ಪೈನಲ್ ಪಂದ್ಯ ಸೋತ ಬೆನ್ನಲ್ಲೇ ದುಃಖ ತಡೆಯಲಾರದೇ ಕಣ್ಣೀರಿಟ್ಟ ಕಾವ್ಯ ಮಾರನ್‌

    ಚೆನ್ನೈ ಮೇ 27 : ಐಪಿಎಲ್ ಪಂದ್ಯದಲ್ಲಿ ಕೆಕೆಆರ್ ವಿರುದ್ದ ಸನ್ ರೈಸರ್ಸ್ ತಂಡ ಸೋಲುತ್ತಿದ್ದಂತೆ ತಂಡದ ಮಾಲಕಗಿ ಕಾವ್ಯಾ ಮಾರನ್ ದುಃಖ ತಡೆಯಲಾರದೇ ಕಾವ್ಯ ಮಾರನ್‌ ಅವರು ಕಣ್ಣೀರಿಟ್ಟರು. ಚೆಪಕ್‌ ಕ್ರೀಡಾಂಗಣದಲ್ಲಿ ಇಂದು ನಡೆದ ಫೈನಲ್‌ ಪಂದ್ಯದಲ್ಲಿ ಶ್ರೇಯಸ್‌ ಅಯ್ಯರ್‌ ನಾಯಕತ್ವದ ಕೆಕೆಆರ್‌ ಗೆಲುವು ದಾಖಲಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು.


    ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿ ಹೈದರಾಬಾದ್‌ ಕಳಪೆ ಬ್ಯಾಟಿಂಗ್‌ ಪ್ರದರ್ಶನ ನೀಡಿತು. ಯಾವೊಬ್ಬ ಬ್ಯಾಟರ್‌ ಕೂಡ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಬ್ಯಾಟರ್‌ಗಳು ಒಬ್ಬೊಬ್ಬರಾಗಿ ಪೆವಿಲಿಯನ್‌ ಪರೇಡ್‌ ನಡೆಸಿದರು. ಇದನ್ನು ಕಂಡು ಫ್ರಾಂಚೈಸಿ ಮಾಲೀಕರಾದ ಕಾವ್ಯ ಮಾರನ್‌ ಸಪ್ಪೆ ಮೋರೆ ಹಾಕಿಕೊಂಡು ಕೂತಿದ್ದರು. ಪಂದ್ಯದ ಆರಂಭದಿಂದ ಕೊನೆ ವರೆಗೂ ಅವರ ಮುಖದಲ್ಲಿ ಬೇಸರ ಆವರಿಸಿತ್ತು.


    ಕೊನೆ ಕ್ಷಣದಲ್ಲಿ ಹೈದರಾಬಾದ್‌ ಸೋಲು ಖಚಿತವಾಗುತ್ತಿದ್ದಂತೆ ಕಾವ್ಯ ಮಾರನ್‌ ಅವರ ಮನದಲ್ಲಿದ್ದ ದುಃಖದ ಕಟ್ಟೆಯೊಡೆಯಿತು. ಎಷ್ಟೇ ಪ್ರಯತ್ನಿಸಿದರೂ ಅಳು ತಡೆಯಲಾಗಲಿಲ್ಲ. ಕಣ್ಣಲ್ಲಿ ನೀರು ಹರಿಯಿತು. ಈ ದೃಶ್ಯವು ಕ್ಯಾಮೆರಾದಲ್ಲಿ ಸೆರೆಯಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply