DAKSHINA KANNADA
ಕೌನ್ ಬನೇಗಾ ಕರೋಡ್ ಪತಿಯಲ್ಲಿ 25 ಲಕ್ಷ ಗೆದ್ದಿರುವುದಾಗಿ ಹೇಳಿ ಟ್ಯಾಕ್ಸ್ ಗಾಗಿ 13 ಲಕ್ಷ ವಸೂಲಿ…!!
ಪುತ್ತೂರು ಸೆಪ್ಟಂಬರ್ 21: ಕೌನ್ ಬನೇಗಾ ಕರೋಡ್ ಪತಿಯಲ್ಲಿ 25 ಲಕ್ಷ ಬಹುಮಾನ ಬಂದಿದೆ ಎಂದು ಹೇಳಿ ಮಹಿಳೆಯೊಬ್ಬರಿಂದ ಅಪರಿಚಿತ ವ್ಯಕ್ತಿ 13 ಲಕ್ಷ ಹಣ ವಸೂಲಿ ಮಾಡಿದ ಘಟನೆ ನಡೆದಿದ್ದು, ಮಂಗಳೂರಿನ ಸೆನ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.
ಪುತ್ತೂರು ನಿವಾಸಿಯಾದ ಝೀನತ್ ಬಾನು ಎಂಬವರು ವಂಚನೆಗೆ ಒಳಗಾದವರು,. ಅವರು ನೀಡಿದ ದೂರಿನಂತೆ 2022 ನೇ ಮೇ ತಿಂಗಳಲ್ಲಿ ಅಪರಿಚಿತ ವ್ಯಕ್ತಿ ವಾಟ್ಸಪ್ ಕರೆ ಮಾಡಿ ತಾನು ಕೌನ್ ಬನೇಗಾ ಕರೋಡಪತಿ ಎಂಬ ಕಾರ್ಯಕ್ರಮದಿಂದ ಕರೆ ಮಾಡುತ್ತಿರುವುದಾಗಿ ಹೇಳಿದ್ದು, ನೀವು 25 ಲಕ್ಷ ಲಾಟರಿ ಗೆದ್ದಿರುವುದಾಗಿ ತಿಳಿಸಿರುತ್ತಾರೆ. ನಂತರ ಸದ್ರಿ ಹಣವನ್ನು ಪಡೆಯುವರೇ ಟ್ಯಾಕ್ಸ್ ಕಟ್ಟಲು ಹಾಗೂ ಇನ್ನಿತರ ಚಾರ್ಜಸ್ ಗಳ ಕಾರಣ ಹೇಳಿ ಮಹಿಳೆಯಿಂದ 2022 ಮೇ ತಿಂಗಳಿನಿಂದ 2023 ಸಪ್ಟಂಬರ್ 13 ರವರೆಗಿನ ಅವಧಿಯಲ್ಲಿ ಅಪರಿಚಿತ ವ್ಯಕ್ತಿಯು ವಿವಿಧ ಬ್ಯಾಂಕ್ ಖಾತೆಗಳಿಗೆ ಸುಮಾರು ರೂ. 12,93,200/- ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುತ್ತಾನೆ. ದಕ್ಷಿಣ ಕನ್ನಡ ಜಿಲ್ಲಾ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಅಕ್ರ ಅ.ಕ್ರ: 29/2023 ಕಲಂ: 66(D), IT act 417 420 IPC ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.