Connect with us

    LATEST NEWS

    ಮೇ 19 ರಂದು ಅಡ್ಯಾರ್ ಗಾರ್ಡನ್‌ನಲ್ಲಿ ಕೆಸಿಎಫ್ ದಶಮಾನೋತ್ಸವ ಕಾರ್ಯಕ್ರಮ

    ಮಂಗಳೂರು, ಮೇ 16: ಅನಿವಾಸಿ ಕನ್ನಡಿಗರ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್)ನ ದಶಮಾನೋತ್ಸವ ಕಾರ್ಯಕ್ರಮವು ಮೇ 19ರಂದು ನಗರದ ಅಡ್ಯಾರ್ ಗಾರ್ಡನ್‌ನಲ್ಲಿ ನಡೆಯಲಿದೆ ಎಂದು ಕೆಸಿಎಫ್ ಅಂತಾರಾಷ್ಟ್ರೀಯ ವೇದಿಕೆಯ ಅಧ್ಯಕ್ಷ ಡಿಪಿ ಯೂಸುಫ್ ಸಖಾಫಿ ಹೇಳಿದ್ದಾರೆ.


    ನಗರದ ಖಾಸಗಿ ಹೊಟೇಲ್‌ನಲ್ಲಿ ಗುರುವಾರ ಸುದ್ದಿಗೋಷಿ ಮಾತನಾಡಿದ ಅವರು 10 ವರ್ಷಗಳ ಹಿಂದೆ ಸ್ಥಾಪನೆಗೊಂಡ ಕೆಸಿಎಫ್ ಇಂದು ಆರು ಕೊಲ್ಲಿ ರಾಷ್ಟ್ರಗಳಲ್ಲದೆ ಬ್ರಿಟನ್, ಮಲೇಷ್ಯಾದಲ್ಲೂ ಶಾಖೆಗಳನ್ನು ಹೊಂದಿವೆ. ಉದ್ಯೋಗ ನಿಮಿತ್ತ ಗಲ್ಫ್ ರಾಷ್ಟ್ರಗಳಿಗೆ ತೆರಳಿರುವ ಕನ್ನಡಿಗರ ಪೈಕಿ ಹಲವರು ರೋಗರುಜಿನಗಳಿಗೆ, ಕಾನೂನು ಕ್ರಮಗಳಿಗೆ ಗುರಿಯಾಗುವುದು, ಶೋಷಣೆಗೆ ಒಳಗಾಗುವುದು ಇತ್ಯಾದಿ ಸಮಸ್ಯೆಗೆ ಈಡಾಗುತ್ತಾರೆ. ಇಂತಹ ಸಂದರ್ಭ ಕೆಸಿಎಫ್ ಮಧ್ಯಪ್ರವೇಶಿಸಿ ಜಾತಿ, ಮತ ಭೇದವಿಲ್ಲದೆ ಪರಿಹಾರ ಒದಗಿಸುವುದಲ್ಲದೆ ಜೈಲಿನಿಂದ ಬಿಡುಗಡೆಗೊಳಿಸಿ ಊರಿಗೆ ಕಳುಹಿಸುವುದು, ಮೃತದೇಹಗಳ ಅಂತ್ಯಸಂಸ್ಕಾರ ಮಾಡುವುದು ಇತ್ಯಾದಿಗಳಲ್ಲದೆ ಕೋವಿಡ್ ಸಂದರ್ಭ 15 ಚಾರ್ಟರ್ಡ್ ವಿಮಾನಗಳ ಮೂಲಕ ಅನೇಕ ಮಂದಿ ಮನೆಗೆ ಮರಳುವಂತೆ ಮಾಡಲಾಗಿದೆ ಎಂದರು.

    ಕೆಸಿಎಫ್ ದಶಮಾನೋತ್ಸವ ಕಾರ್ಯಕ್ರಮವು ಮೇ 19ರಂದು ಬೆಳಗ್ಗೆ 10ರಿಂದ ರಾತ್ರಿ 10ರವರೆಗೆ ನಡೆಯಲಿದೆ. ದಶಮಾನೋತ್ಸವ ಪ್ರಯುಕ್ತ 10 ಜೋಡಿ ಸಾಮೂಹಿಕ ಮದುವೆ, 10 ಕುಟುಂಬಕ್ಕೆ ಮನೆ ನಿರ್ಮಾಣ, 10 ಸರಕಾರಿ ಶಾಲೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, 10 ಸಾರ್ವಜನಿಕ ಕೊಳವೆ ಬಾವಿ ಸಹಿತ ವಿವಿಧ 10 ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು.ಕುಟುಂಬ ಸಂಗಮ, ವಿದ್ಯಾರ್ಥಿ ಸಮಾವೇಶ, ಎಕ್ಸಲೆನ್ಸಿ ಮೀಟ್, ಪ್ರತಿನಿಧಿ ಸಮ್ಮೇಳನ ನಡೆಯಲಿದೆ ಎಂದು ಡಿಪಿ ಯೂಸುಫ್ ಸಖಾಫಿ ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply