LATEST NEWS
ಎರಡು ದಿನದಲ್ಲಿ ನಾನು ರಾಜೀನಾಮೆ – ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ
ದೆಹಲಿ ಸೆಪ್ಟೆಂಬರ್ 15: ಮದ್ಯ ನೀತಿ ಹಗರಣದಲ್ಲಿ ಸುಪ್ರೀಂಕೋರ್ಟ್ ನಿಂದ ಷರತ್ತಬದ್ದ ಜಾಮೀನು ಪಡೆದಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇದೀಗ ನಾನು ಎರಡು ದಿನದಲ್ಲಿ ರಾಜೀನಾಮೆ ನೀಡುತ್ತೆನೆ ಎಂದು ಘೋಷಣೆ ಮಾಡಿ ಎಲ್ಲರ ಹುಬ್ಬೆರಿಸಿದ್ದಾರೆ.
ಆಮ್ ಆದ್ಮಿ ಕಚೇ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಿಜೆಪಿ ತನ್ನ ವಿರುದ್ಧ ಸುಳ್ಳು ಆರೋಪ ಮಾಡಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಹೀಗಾಗಿ ಸಾರ್ವಜನಿಕ ನ್ಯಾಯಾಲಯದ ಮೊರೆ ಹೋಗುತ್ತೇವೆ.ಅವರ ಸ್ಥಾನದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕರೊಬ್ಬರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ನವೆಂಬರ್‌ನಲ್ಲಿ ದೆಹಲಿ ಚುನಾವಣೆ ನಡೆಸುವಂತೆ ಎಎಪಿ ಸಂಚಾಲಕರು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. ಮದ್ಯನೀತಿ ಹಗರಣದಲ್ಲಿ ಜೈಲುಪಾಲಾಗಿದ್ದ ಕೇಜ್ರಿವಾಲ್, ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದ ನಂತರ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಜನರು ನಿರ್ಧರಿಸುವವರೆಗೂ ಮುಖ್ಯಮಂತ್ರಿ ಹುದ್ದೆಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ನಾನು ರಾಜೀನಾಮೆ ನೀಡಿದ ನಂತರ ದೆಹಲಿ ವಿಧಾನಸಭೆಯನ್ನು ವಿಸರ್ಜಿಸುವುದಿಲ್ಲ ಎಂದು ಅವರು ಹೇಳಿದರು. ಆಮ್ ಆದ್ಮಿ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುವುದು. ಈ ಸಂದರ್ಭದಲ್ಲಿ, ಈ ಅವಧಿಯಲ್ಲಿ ಮನೀಶ್ ಸಿಸೋಡಿಯಾ ಅವರು ಯಾವುದೇ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ ಎಂದು ಕೇಜ್ರಿವಾಲ್ ಹೇಳಿದರು.