Connect with us

LATEST NEWS

ಕೇರಳದಲ್ಲಿ ನಡೆದ ಭೀಕರ ರಸ್ತೆ ಅಪಘಾತದ ಸಿಸಿಟಿವಿ ವಿಡಿಯೋ

ಕೇರಳದಲ್ಲಿ ನಡೆದ ಭೀಕರ ರಸ್ತೆ ಅಪಘಾತದ ಸಿಸಿಟಿವಿ ವಿಡಿಯೋ

ಕೇರಳ ಜನವರಿ 7: ಅಂಬ್ಯುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕೊಲ್ಲಂ ನಲ್ಲಿ ನಡೆದಿದ್ದು ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮೃತರನ್ನು ಚಂದ್ರನ್ ಎಂದು ಗುರುತಿಸಲಾಗಿದೆ. ದುರ್ಘಟನೆಯಲ್ಲಿ ರಸ್ತೆ ಬದಿ ನಿಂತಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಕೊಲ್ಲಂನ ಓಚಿರ ಎಂಬಲ್ಲಿ ಈ ಅಪಘಾತ ನಡೆದಿದೆ.

ನಿಯಂತ್ರಣ ತಪ್ಪಿದ ಅಂಬ್ಯುಲೆನ್ಸ್ ಸೈಕಲ್, ಎರಡು ಸ್ಕೂಟರ್, ಆಟೋರಿಕ್ಷಾ ಹಾಗೂ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆಗಾಗಿ ಮಗುವೊಂದನ್ನು ಅಂಬ್ಯುಲೆನ್ಸ್ ನಲ್ಲಿ ತಿರುವನಂತಪುರದ ಆಸ್ಪತ್ರೆಗೆ ಕೊಂಡೊಯ್ದು ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ.

ಅಂಬ್ಯುಲೆನ್ಸ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

VIDEO