Connect with us

LATEST NEWS

ಕೇರಳ- ಪ್ರವಾಸಿಗರಿದ್ದ ಬೋಟ್ ಮುಳುಗಿ ಮಕ್ಕಳು ಸೇರಿದಂತೆ 22 ಮಂದಿ ಸಾವು…!!

ತಿರುವನಂತಪುರಂ: ಕೇರಳದಲ್ಲಿ ಮಲಪ್ಪುರಂನಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಪ್ರವಾಸಿಗರಿದ್ದ ಬೋಟ್ ಒಂದು ಮುಳುಗಿದ ಪರಿಣಾಮ 22 ಮಂದಿ ಸಾವನಪ್ಪಿದ್ದಾರೆ.


ಕೇರಳದ ಮಲಪ್ಪುರಂನ ತನೂರ್‌ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 40 ಪ್ರಯಾಣಿಕರು ದೋಣಿಯಲ್ಲಿ ಇದ್ದರು. ಘಟನೆಯ ವೇಳೆ ದೋಣಿಯಡಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಮಗುಚಿ ಬಿದ್ದ ದೋಣಿಯನ್ನು ದಡಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ.


ಸದ್ಯ ಸಾವಿನ ಸಂಖ್ಯೆ ಈಗ 22ಕ್ಕೆ ಏರಿದೆ. 7 ಜನರ ಸ್ಥೀತಿ ಗಂಭೀರವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ . ಘಟನೆಯಲ್ಲಿ ಮೃತಪಟ್ಟ ಕುಟುಂಬಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಪರಿಹಾರ ನಿಧಿಯಿಂದ 2 ಲಕ್ಷ ರೂ ಘೋಷಿಸಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಸಾವಿಗೆ ಸಂತಾಪ ಸೂಚಿಸಿ ಹೇಳಿಕೆ ನೀಡಿದ್ದು, ಸಂಘಟಿತ ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಮಲಪ್ಪುರಂ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *