DAKSHINA KANNADA
ಮಂಗಳೂರಿನಲ್ಲಿ ಕೇರಳ ಉದ್ಯಮಿ ಅಪಹರಣ,10 ಲಕ್ಷ ಹಣಕ್ಕೆ ಬೇಡಿಕೆ..!?
ಮಂಗಳೂರು : ಮಂಗಳೂರಿಗೆ ವ್ಯವಹಾರ ನಿಮಿತ್ತ ಬಂದಿದ್ದ ಕೇರಳ ಮೂಲದ ಉದ್ಯಮಿಯನ್ನು ದುಷ್ಕರ್ಮಿಗಳು ಅಪಹರಿಸಿದ ಘಟನೆ ನಡೆದಿದೆ. ಈ ಸಂಬಂಧ ಮಂಗಳೂರು ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
ಮಂಗಳೂರಿನ ಖಾಸಾಗಿ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸೀಟು ಮಾಡಿಸಿಕೊಡಲು ಕೇರಳದಿಂದ ಬಂದಿದ್ದ ಶರತ್ ಕೆಲಸ ಮುಗಿಸಿ ಬೆಂಗಳೂರಿಗೆ ತೆರಳಲು ಮಂಗಳವಾರ ರಾತ್ರಿ ನಗರ ಪಿವಿಎಸ್ ಬಳಿ ಬಸ್ ಕಾಯುತ್ತಿದ್ದಾಗ ಕಾರಿನಲ್ಲಿ ಬಂದ ನಾಲ್ವರ ತಂಡ ಶರತ್ ಅವರನ್ನು ಬಲವಂತವಾಗಿ ಕಾರಿಗೆ ಹಾಕಿ ಅಪಹರಿಸಿದ್ದಾರೆ. ಬಳಿಕ ಆತನ ಮನೆಯವರಿಗೆ ಫೋನ್ ಮಾಡಿ 10 ಲಕ್ಷ ರೂಪಾಯಿಗಳ ಡಿಮಾಂಡ್ ಇಟ್ಟಿದ್ದಾರೆ.
10 ಲಕ್ಷ ಕೊಟ್ಟರೆ ಆತನನ್ನು ಬಿಡುಗಡೆ ಮಾಡುವುದಾಗಿ ಅವಾಜ್ ಹಾಕಿದ್ದಾರೆ ಎನ್ನಲಾಗಿದ್ದು ಶರತ್ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ ಎನ್ನಲಾಗಿದ್ದು ಈ ಬಗ್ಗೆ ಕದ್ರಿ ಪೊಲೀಸರು ಪ್ರಕರಣ ದಾಖಲು ಮಾಡಿ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದು ತನಿಖೆ ಕೈಗೊಂಡಿದ್ದಾರೆ.
You must be logged in to post a comment Login