LATEST NEWS
ಕೇರಳ ಗಡಿ ಬಂದ್ – ಪ್ರಧಾನಿ ಮಧ್ಯಪ್ರವೇಶಕ್ಕೆ ಕೇರಳ ಸಿಎಂ ಒತ್ತಾಯ
ಕೇರಳ ಫೆಬ್ರವರಿ 23: ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕರ್ನಾಟಕ ಸರಕಾರ ಕೇರಳ ಗಡಿಗಳಲ್ಲಿ ನಿರ್ಬಂಧಗಳನ್ನು ವಿಧಿಸುವುದರ ವಿರುದ್ದ ಕೇರಳ ಸರ್ಕಾರ ಕೇಂದ್ರಕ್ಕೆ ದೂರು ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ಒತ್ತಾಯಿಸಿದ್ದಾರೆ.
ಈ ಸಂಬಂಧ ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಕೇರಳ ಸಿಎಂ, ಅಂತರಾಜ್ಯ ಗಡಿ ಬಂದ್ ಮಾಡುವುದು ಮತ್ತು ನಿರ್ಬಂಧ ವಿಧಿಸುವುದು ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ. ಅಂತರಾಜ್ಯ ಪ್ರಯಾಣಕ್ಕೆ ಯಾವುದೇ ರಾಜ್ಯ ನಿರ್ಬಂಧ ಹೇರುವಂತಿಲ್ಲ ಎಂದು ಹೇಳಿದ್ದಾರೆ.
ನೆರೆಯ ರಾಜ್ಯಕ್ಕೆ ಪ್ರಯಾಣಿಸುವಾಗ ಜನರು ಎದುರಿಸುತ್ತಿರುವ ಕಷ್ಟಗಳನ್ನು ಪರಿಹರಿಸಲು ಪ್ರಧಾನಿ ಮೋದಿ ತುರ್ತು ಮಧ್ಯ ಪ್ರವೇಶಿಸಬೇಕು. ಯಾವುದೇ ರಾಜ್ಯಗಳು ಅಂತರರಾಜ್ಯ ಪ್ರಯಾಣವನ್ನು ತಡೆಯಬಾರದು ಎಂಬ ಕೇಂದ್ರ ಸರ್ಕಾರದ ಸೂಚನೆಗೆ ವಿರುದ್ಧವಾಗಿ ಈ ನಿರ್ಬಂಧಗಳಿವೆ ಎಂದು ಪಿಣರಾಯಿ ದೂರಿದ್ದಾರೆ.
ಕರ್ನಾಟಕದ ನಿರ್ಬಂಧಗಳಿಂದಾಗಿ ಅಗತ್ಯ ಸರಕುಗಳನ್ನು ಸಾಗಿಸುವ ಟ್ರಕ್‌ಗಳು, ವಿದ್ಯಾರ್ಥಿಗಳು, ವೈದ್ಯಕೀಯ ಚಿಕಿತ್ಸೆಗಾಗಿ ಹೋಗುವ ರೋಗಿಗಳು ಸೇರಿದಂತೆ ಅನೇಕ ಜನರು ರಾಜ್ಯದ ಗಡಿಯಲ್ಲಿ ಅನಗತ್ಯ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಅಂತರರಾಜ್ಯ ಸಂಚಾರಕ್ಕೆ ನಿರ್ಬಂಧ ಹೇರುವುದು ಭಾರತ ಸರ್ಕಾರದ ಸೂಚನೆಗೆ ವಿರುದ್ಧವಾಗಿದೆ ಎಂದು ಕೇರಳ ಸಿಎಂ ದೂರಿದ್ದಾರೆ. ಕೇರಳದಿಂದ ಕರ್ನಾಟಕಕ್ಕೆ ಬರುವವರಿಗೆ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ ಮತ್ತು ರಾಜ್ಯ ಪ್ರವೇಶಿಸುವ ಕೆಲವು ಮಾರ್ಗಗಳನ್ನು ಸಹ ಬಂದ್ ಮಾಡಲಾಗಿದೆ
Facebook Comments
You may like
ಮಂಗಳೂರು ವಿಮಾನ ನಿಲ್ದಾಣದಲ್ಲಿ 61 ಲಕ್ಷ ಮೌಲ್ಯದ 1 ಕೆಜಿಗೂ ಅಧಿಕ ಚಿನ್ನ ವಶಕ್ಕೆ
ಕಾಸರಗೋಡು ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ – ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಕೇರಳ ಮೀನುಗಾರರೊಂದಿಗೆ ಸಮುದ್ರದಲ್ಲಿ ಈಜಾಡಿ ಸಂಭ್ರಮಿಸಿದ ರಾಹುಲ್ ಗಾಂಧಿ
ಕೇರಳ ಮತ್ತು ಮುಂಬೈಯಿಂದ ಬರುವವರಿಗೆ ಆರ್.ಟಿ.ಪಿ.ಸಿ.ಆರ್ ಕಡ್ಡಾಯ : ಸಂಸದೆ ಶೋಭಾ
‘ಮೆಟ್ರೋ ಮ್ಯಾನ್’ ಶ್ರೀಧರನ್ ಬಳಿಕ ಬಿಜೆಪಿ ಪಡೆ ಸೇರುವರೇ ಪಿ.ಟಿ. ಉಷಾ..?
19 ವರ್ಷದ ಆನೆಯನ್ನು ಮರಕ್ಕೆ ಕಟ್ಟಿಹಾಕಿ ಕೋಲಿನಿಂದ ಭಾರಿಸಿದ ಮಾವುತ…ವಿಡಿಯೋ ವೈರಲ್
You must be logged in to post a comment Login