LATEST NEWS
ಕೇರಳ ಸಿಎಂ ಪುತ್ರಿ ವೀಣಾ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಕೇಂದ್ರ ಸರಕಾರದ ಅನುಮತಿ

ಎರ್ನಾಕುಲಂ ಎಪ್ರಿಲ್ 04: ಕೇರಳ ಸಿಎಂ ಪಿಣರಾಯಿ ವಿಜಯನ್ ಪುತ್ರಿ ವೀಣಾ ವಿರುದ್ದ ಕಾನೂನು ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರಕಾರ ಅನುಮತಿ ನೀಡಿದೆ. ಕೊಚ್ಚಿನ್ ಮಿನರಲ್ಸ್ ಮತ್ತು ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಒಳಗೊಂಡ ಕಂಪೆನಿಗಳಲ್ಲಿ ನಡೆದಿದೆ ಎನ್ನಲಾದ ಪಾವತಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ಟಿ ವೀಣಾ ವಿರುದ್ಧ ಪ್ರಾಸಿಕ್ಯೂಷನ್ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಗುರುವಾರ ಅನುಮತಿ ನೀಡಿದೆ.
ಎಸ್‌ಎಫ್‌ಐಒ ಕೊಚ್ಚಿಯ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿಯ ಆಧಾರದ ಮೇಲೆ ಕೇಂದ್ರವು ಈ ಕ್ರಮ ಕೈಗೊಂಡಿದೆ. ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ, SFIO ವೀಣಾ, CMRL ವ್ಯವಸ್ಥಾಪಕ ನಿರ್ದೇಶಕ ಶಶಿಧರನ್ ಕರ್ತಾ ಮತ್ತು ಇತರ 25 ಜನರನ್ನು ಆರೋಪಿಗಳೆಂದು ಹೆಸರಿಸಿದೆ. CMRL, ಎಕ್ಸಲಾಜಿಕ್ ಸೊಲ್ಯೂಷನ್ಸ್ ಮತ್ತು ಎಂಪವರ್ ಇಂಡಿಯಾ ಕ್ಯಾಪಿಟಲ್ ಇನ್ವೆಸ್ಟ್ಮೆಂಟ್ಸ್ ಸೇರಿದಂತೆ ಹಲವಾರು ಸಂಸ್ಥೆಗಳನ್ನು ಸಹ ಪಟ್ಟಿ ಮಾಡಲಾಗಿದೆ. ಅಪರಾಧ ಸಾಬೀತಾದರೆ, ವೀಣಾ ಮತ್ತು ಇತರ ಆರೋಪಿಗಳು 2013 ರ ಕಂಪನಿ ಕಾಯ್ದೆಯಡಿಯಲ್ಲಿ ಆರು ತಿಂಗಳಿಂದ ಹತ್ತು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ. ಜೈಲು ಶಿಕ್ಷೆಯ ಜೊತೆಗೆ, ಅಕ್ರಮವಾಗಿ ಸಂಗ್ರಹಿಸಿದ ಮೊತ್ತದ ಮೂರು ಪಟ್ಟು ದಂಡವನ್ನು ಅಪರಾಧಿಗಳಿಗೆ ವಿಧಿಸಲಾಗುತ್ತದೆ.
