LATEST NEWS
ಟಿಕೆಟ್ ನಿರಾಕರಿಸಿದ್ದಕ್ಕೆ ತಲೆಬೊಳಿಸಿ ಪ್ರತಿಭಟಿಸಿದ ಕೇರಳ ಮಹಿಳಾ ಕಾಂಗ್ರೇಸ್ ವಿಭಾಗದ ಮುಖ್ಯಸ್ಥೆ
ಕೇರಳ : ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ್ದಕ್ಕೆ ಮನನೊಂದ ಕೇರಳದ ಮಹಿಳಾ ಕಾಂಗ್ರೆಸ್ ವಿಭಾಗದ ಮುಖ್ಯಸ್ಥರೊಬ್ಬರು ತಲೆಬೋಳಿಸಿಕೊಂಡು ಪ್ರತಿಭಟನೆ ನಡೆಸಿದ್ದಾರೆ.
ಕೇರಳದಲ್ಲಿ ಇದೇ ಏಪ್ರಿಲ್ 6 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇತ್ತೀಚೆಗೆ ದಿಲ್ಲಿಯಲ್ಲಿ ಬಿಡುಗಡೆ ಮಾಡಿತ್ತು. ಆದರೆ ಅಭ್ಯರ್ಥಿಗಳ ಪಟ್ಟಿಯಲ್ಲಿ ಎಟ್ಟುಮಣ್ಣೂರು ಕ್ಷೇತ್ರದಿಂದ ಆಕಾಂಕ್ಷಿಯಾಗಿದ್ದ ಕೇರಳ ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ಲತಿಕಾ ಸುಭಾಷ್ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಹೀಗಾಗಿ ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷದ ಕಚೇರಿಯ ಮುಂಭಾಗದಲ್ಲಿ ಕುಳಿತು ತಲೆ ಬೋಳಿಸಿಕೊಂಡು ಪ್ರತಿಭಟಿಸಿದ್ದಾರೆ.
ಇನ್ನು ಇದೇ ಮೊದಲ ಬಾರಿಗೆ ಕೇರಳ ಕಾಂಗ್ರೆಸ್ನಲ್ಲಿ ಈ ರೀತಿಯ ಘಟನೆ ನಡೆದಿದ್ದು, ಚುನಾವಣಾ ಟಿಕೆಟ್ ನಿರಾಕರಿಸಿದ್ದಕ್ಕಾಗಿ ಯಾವುದೇ ರಾಜಕೀಯ ಪಕ್ಷದ ನಾಯಕರು ಹೈಕಮಾಂಡ್ ವಿರುದ್ಧ ಈ ರೀತಿ ಪ್ರತಿಭಟನೆ ನಡೆಸಿರುವುದು ಇದೇ ಮೊದಲು ಎನ್ನಲಾಗಿದೆ.