KARNATAKA
ಕೇರಳದಲ್ಲಿ ಕೊರೊನಾ ಪ್ರಕರಣ – ಪೆರುಂಬಾಡಿ ಚೆಕ್ ಪೋಸ್ಟ್ ನಲ್ಲಿ ಆರೋಗ್ಯ ತಪಾಸಣೆ
ವಿರಾಜಪೇಟೆ : ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆ ಕೇರಳ ಗಡಿಭಾಗದಲ್ಲಿ ಆರೋಗ್ಯ ಇಲಾಖೆ ಚೆಕ್ ಪೋಸ್ಟ್ ನಿರ್ಮಾಣ ಮಾಡಿದ್ದು, ಇದೀಗ ಪ್ರಯಾಣಿಕರ ಆರೋಗ್ಯ ತಪಾಸಣೆ ಆರಂಭಿಸಿದೆ.
ಕೇರಳದಲ್ಲಿ ಕೊರೊನಾದ ನೂತನ ಪ್ರಕರಣಗಳು ಏರಿಕೆಯಾಗಿದ್ದು, ಈ ಹಿನ್ನಲೆ ಕರ್ನಾಟಕದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೇರಳದಿಂದ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆ ಆರಂಭಿಸಿದೆ. ಗಡಿ ಪ್ರದೇಶವಾದ ಪೆರುಂಬಾಡಿ ಚೆಕ್‌ಪೋಸ್ಟ್‌ನಲ್ಲಿ ಸೋಮವಾರ ಪ್ರಯಾಣಿಕರ ಆರೋಗ್ಯ ತಪಾಸಣೆ ಆರಂಭಿಸಲಾಯಿತು. ರಳದಿಂದ ಬರುವ ಖಾಸಗಿ ವಾಹನಗಳನ್ನು ತಡೆದು ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಯಿತು.
ಆರೋಗ್ಯ ನಿರೀಕ್ಷಣಾಧಿಕಾರಿ ಚಿರಂಜೀವಿ ಪ್ರತಿಕ್ರಿಯಿಸಿ, ‘ಇಲಾಖೆಯ ಸೂಚನೆಯಂತೆ ತಪಾಸಣೆ ನಡೆಸಲಾಗುತ್ತಿದೆ. ಸೋಂಕಿನ ಲಕ್ಷಣ ಕಂಡುಬಂದಲ್ಲಿ ಅವರಿಗೆ ವಿರಾಜಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ನಂತರ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ವತ್ರೆಗೆ ಕಳಿಸಲಾಗುತ್ತದೆ. ಇಲ್ಲಿಯವರೆಗೆ ನಡೆದ ತಪಾಸಣೆಯ ಸಂದರ್ಭ ಯಾರಿಗೂ ಸೋಂಕಿನ ಲಕ್ಷಣ ಕಂಡುಬಂದಿಲ್ಲ’ ಎಂದು ಮಾಹಿತಿ ನೀಡಿದರು.