Connect with us

    LATEST NEWS

    ಕೇರಳ -ತಬ್ಬಿಕೊಂಡೆ ಜಲಪ್ರಳಯಕ್ಕೆ ತುತ್ತಾದ ತಾಯಿ ಮಗು..ದೃಶ್ಯಕಂಡು ಕಣ್ಣೀರು ಹಾಕಿದ ರಕ್ಷಣಾ ತಂಡ

    ಕೇರಳ : ವಾಯುಭಾರ ಕುಸಿತದಿಂದಾಗಿ ಕೇರಳದಲ್ಲಿ ಸುರಿದ ಮಳೆ ಭಾರಿ ಅನಾಹುತವನ್ನೆ ಮಾಡಿದ್ದು ಮಳೆಯಿಂದಾಗಿ ಉಂಟಾದ ಭೂ ಕುಸಿತಕ್ಕೆ 35ಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ. ಈ ನಡುವೆ ರಕ್ಷಣಾ ಕಾರ್ಯದರಲ್ಲಿ ತೊಡಗಿರುವ ರಾಜ್ಯ ಮತ್ತು ಕೇಂದ್ರದ ತಂಡಗಳಿಗೆ ಮಳೆ ಸೃಷ್ಟಿಸಿರುವ ಭೀಕರತೆ ಗೋಚರವಾಗುತ್ತಿದೆ. ಅವಶೇಷ ತೆರವು ವೇಳೆ ಪತ್ತೆಯಾಗಿರುವ ಶವಗಳು ಮನಕಲಕುವ ಕತೆಗಳನ್ನು ಹೇಳುತ್ತಿವೆ.


    ಮೂರು ಮಕ್ಕಳು ಪರಸ್ಪರ ಕೈ ಹಿಡಿದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿತ್ತು. ಸೋಮವಾರ ತಾಯಿ ಹಾಗೂ ಮಗು​ವಿನ ಶವವು ತಪ್ಪಿ​ಕೊಂಡ ಸ್ಥಿತಿ​ಯಲ್ಲೇ ಪತ್ತೆ​ಯಾ​ಗಿದೆ. ಈ ದೃಶ್ಯವನ್ನು ಕಂಡು ಖುದ್ದು ರಕ್ಷಣಾ ತಂಡ​ಗಳೇ ಕಣ್ಣೀರು ಹಾಕಿ​ವೆ.


    ಸಂಬಂಧಿಕರ ಮದುವೆಗೆ ಬಂದಿದ್ದ ತಾಯಿ ಹಾಗೂ ಮಳೆಗೆ ಕುಸಿದ ಮನೆಯ ಅವಶೇಷಗಳ ಅಡಿ ಸಿಲುಕಿ ಸಾವನ್ನಪ್ಪಿರುವ ಈ ದಾರುಣ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ನಡೆದಿದೆ. ಅವಶೇಷಗಳನ್ನು ತೆಗೆ​ಯು​ವ ಸಮಯದಲ್ಲಿ ತಾಯಿ-ಮಗ ಇಬ್ಬರೂ ತಬ್ಬಿಕೊಂಡು ಮಲಗಿರುವ ಸ್ಥಿತಿ​ಯ​ಲ್ಲಿ​ದ್ದರು. ಇದೇ ವೇಳೆ, ಮತ್ತೊಂದು ಮಗು ತೊಟ್ಟಿಲಿನಲ್ಲೇ ಸಾವನ್ನಪ್ಪಿರುವ ದಾರುಣ ದೃಶ್ಯ ಕಂಡು​ಬಂತು.


    ಮೃತ ತಾಯಿ ಮಗನನ್ನು ಫೌಝಿಯಾ (28) ಮತ್ತು ಅಮೀನ್‌(10) ಎಂದು ಗುರುತಿಸಲಾಗಿದೆ. ಕಟ್ಟಡ ಕುಸಿಯುವ ಮೊದಲು ಮನೆಯ ಒಳಗೆ ನೀರು ನುಗ್ಗುತ್ತಿರುವ ದೃಶ್ಯವನ್ನು ವಿಡಿಯೋ ಮಾಡಿ ಸಂಬಂಧಿಕರೊಬ್ಬರಿಗೆ ಇವರು ಕಳಿ​ಸಿ​ದ್ದ​ರು. ಆದರೆ ಕೆಲವೇ ಕ್ಷಣಗಳಲ್ಲಿ ಇಡೀ ಮನೆ ಪ್ರವಾಹಕ್ಕೆ ಮುಳುಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply