Connect with us

    LATEST NEWS

    ಕೇರಳ – 11 ಮಂದಿ ಪೌರ ಕಾರ್ಮಿಕ ಮಹಿಳೆಯರಿಗೆ 10 ಕೋಟಿ ಲಾಟರಿ ಬಂಪರ್…!!

    ಮಲಪ್ಪುರಂ ಜುಲೈ 28: ಕೇರಳದ ಪೌರ ಕಾರ್ಮಿಕ ಮಹಿಳೆಯರ ಗುಂಪೊಂದು ಕೇರಳ ಲಾಟರಿಯಲ್ಲಿ 10 ಕೋಟಿ ಹಣವನ್ನು ಗೆದ್ದಿದ್ದಾರೆ.


    ಪರಪ್ಪಂನಂಗಡಿ ನಗರಸಭೆಯ ‘ಹರಿತ ಕರ್ಮ ಸೇನೆ‘ಯ 11 ಮಹಿಳೆಯರು ತಲಾ ₹25 ಷೇರು ಹಾಕಿ ವಾರದ ಹಿಂದೆ ₹250ನ ಲಾಟರಿ ಟಿಕೇಟ್‌ ಖರೀದಿಸಿದ್ದರು. ಇದೀಗ ಅವರು ಕೋಟಿ ಕೋಟಿ ಹಣ ಗೆದ್ದಿದ್ದಾರೆ. ನಾವು ಮೊದಲು ಹಣವನ್ನು ಒಟ್ಟುಗೂಡಿಸಿ ಲಾಟರಿ ಟಿಕೇಟ್‌ ಖರೀದಿಸಿದ್ದೇವು, ಈಗ ಬಹುಮಾನ ಗೆದ್ದಿರುವುದು ಖುಷಿ ಹೆಚ್ಚಿಸಿದೆ’ ಎನ್ನುತ್ತಾರೆ ಲಾಟರಿ ಹಣ ವಿಜೇತೆ ರಾಧಾ ಎನ್ನುವ ಮಹಿಳೆ. ‘ಸಾಲಗಳ ಬಾಕಿ, ಮಕ್ಕಳ ಮದುವೆ, ಆಸ್ಪತ್ರೆ, ಚಿಕಿತ್ಸೆಯ ವೆಚ್ಚ ಸೇರಿ ನಾವೆಲ್ಲರೂ ಆರ್ಥಿಕವಾಗಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದೆವು. ಈಗ ಹಣ ಗೆದ್ದಿರುವುದು ಬದುಕಿನಲ್ಲಿ ಹಲವು ಸಮಸ್ಯೆಗಳ ನಿವಾರಣೆಗೆ ನೆರವಾಗಲಿದೆ’ ಎನ್ನುತ್ತಾರೆ ಇನ್ನೊಬ್ಬ ಮಹಿಳೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *