ಮೈಸೂರು,ಫೆಬ್ರವರಿ 13: ಕೇರಳದ ಲಾಟರಿಯನ್ನು ಮೈಸೂರಿನಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಅರುಣ್ ಕುಮಾರ್ ಹಾಗೂ ಸ್ವಾಮಿ ಎಂಬುವರನ್ನು ಬಂಧಿಸಲಾಗಿದೆ. ಬಂಧಿತರಿಂದ 55,200 ಮೌಲ್ಯದ ಲಾಟರಿ ಟಿಕೆಟ್‌ಗಳು ಹಾಗೂ 22,930 ನಗದು ಸೇರಿದಂತೆ ಒಟ್ಟು 78,130 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿಶೇಷ ತಂಡ ಯಶಸ್ವಿಯಾಗಿ ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಜೈಲಿಗಟ್ಟಿದೆ.

ಕರ್ನಾಟಕದಲ್ಲಿ ಲಾಟರಿ ಮಾರಾಟ ನಿಷಿದ್ಧವಾಗಿದ್ದರೂ, ಗಡಿ ಮೂಲಕ ಅಕ್ರಮ ದಂಧೆ ನಡೆಯುತ್ತಿದೆ ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Share Information