Connect with us

LATEST NEWS

ಕೊರೊನಾ ಪ್ರಕರಣ ಹೆಚ್ಚಿದ್ದರೂ ಕೇರಳದಲ್ಲಿ ನೈಟ್ ಕರ್ಪ್ಯೂ, ಸಂಡೇ ಲಾಕ್ ಡೌನ್ ತೆರವು

ಕೇರಳ ಸೆಪ್ಟೆಂಬರ್ 07: ದೇಶದಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣ ದಾಖಲಾಗುತ್ತಿದ್ದರೂ ಕೂಡ ಕೇರಳದಲ್ಲಿ ಇದೀಗ ರಾತ್ರಿ ಕರ್ಪ್ಯೂ ಹಾಗೂ ಭಾನುವಾರದ ಲಾಕ್ ಡೌನ್ ತೆಗೆಯಲು ನಿರ್ಧರಿಸಿದ್ದು, ಈ ಕುರಿತಂತೆ ಸಿಎಂ ಪಿಣರಾಯಿ ವಿಜಯನ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.


ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕೋವಿಡ್ -19 ಪರಿಸ್ಥಿತಿಯ ಪರಿಶೀಲನಾ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಕ್ರಿಯ ಪ್ರಕರಣಗಳು ಈಗ 2,37,042 ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 25,723 ಹೊಸ ಕೋವಿಡ್ -19 ಪ್ರಕರಣಗಳು ಮತ್ತು 189 ಸಂಬಂಧಿತ ಸಾವುಗಳು ವರದಿಯಾಗಿವೆ ಎಂದರು. ಸದ್ಯ ಕೊರೊನಾ ಪ್ರಕರಣ ಇಳಿಕೆ ಹಾದಿಯಲ್ಲಿರುವ ಕಾರಣ ರಾತ್ರಿ ಕರ್ಪ್ಯೂ ಹಾಗೂ ಭಾನುವಾರದ ಲಾಕ್ ಡೌನ್ ನ್ನು ತೆರವುಗೊಳಿಸಲಾಗಿದೆ ಎಂದು ತಿಳಿಸಿದರು.


ಅಕ್ಟೋಬರ್ 4 ರಿಂದ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಮತ್ತೆ ತೆರೆಯುವ ಸರ್ಕಾರದ ನಿರ್ಧಾರ ಮಾಡಿದ್ದು, ಶಾಲೆಗಳ ಪುನರಾರಂಭದ ಬಗ್ಗೆ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. ಹೊಸ ನಿಯಮದ ಪ್ರಕಾರ, ಪಾಲಿಟೆಕ್ನಿಕ್ ಕಾಲೇಜುಗಳು ಮತ್ತು ತಾಂತ್ರಿಕ ಮತ್ತು ವೈದ್ಯಕೀಯ ಕೋರ್ಸ್‌ಗಳನ್ನು ನೀಡುವ ಸಂಸ್ಥೆಗಳು ಅಕ್ಟೋಬರ್ 4 ರಿಂದ ಕಾರ್ಯನಿರ್ವಹಿಸಲು ಅನುಮತಿಸಲಾಗುವುದು. ಅಂತಿಮ ವರ್ಷದ ವಿದ್ಯಾರ್ಥಿಗಳು ಮತ್ತು ಪದವಿಪೂರ್ವ ಮತ್ತು ಸ್ನಾತಕೋತ್ತರ ಕೋರ್ಸ್‌ಗಳ ಶಿಕ್ಷಕರು ಕೋವಿಡ್ -19 ರ ಕನಿಷ್ಠ ಒಂದು ಡೋಸ್ ಪಡೆದಿದ್ದರೆ ಅವರಿಗೆ ಅವಕಾಶ ನೀಡಲಾಗುವುದು ಎಂದರು.