Connect with us

LATEST NEWS

ಅತ್ಯಾಚಾರ ಪ್ರಕರಣದ ಆರೋಪಿ ಕೆ.ಸಿ ವೇಣುಗೋಪಾಲ್ ಗೆ ಕರ್ನಾಟಕಕ್ಕೆ ಪ್ರವೇಶವಿಲ್ಲ – ಯಡಿಯೂರಪ್ಪ

ಅತ್ಯಾಚಾರ ಪ್ರಕರಣದ ಆರೋಪಿ ಕೆ.ಸಿ ವೇಣುಗೋಪಾಲ್ ಗೆ ಕರ್ನಾಟಕಕ್ಕೆ ಪ್ರವೇಶವಿಲ್ಲ – ಬಿ.ಎಸ್ ಯಡಿಯೂರಪ್ಪ

ಮಂಗಳೂರು ನವೆಂಬರ್ 9: ಸೋಲಾರ್ ಹಗರಣ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೇಸ್ ನ ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕಿಡಿಕಾರಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕೇರಳದಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಮೇಲೆ ಅತ್ಯಾಚಾರದಂತಹ ಪ್ರಕರಣ ದಾಖಲಾಗಿದೆ.

ತನಿಖೆ ನಡೆಸಿದ ಜಸ್ಟಿಸ್ ಶಿವರಂಜನ್ ಅವರ ವರದಿಯಲ್ಲಿ ಕೆ.ಸಿ ವೇಣುಗೋಪಾಲ್ ಮೇಲಿನ ಆರೋಪ ಸಾಬೀತಾಗಿದೆ ಎಂದು ಹೇಳಿದರು. ಈ ಹಿನ್ನಲೆಯಲ್ಲಿ ಕೆ.ಸಿ ವೇಣುಗೋಪಾಲ್ ಈ ಕೂಡಲೇ ತನ್ನ ಎಲ್ಲಾ ಸ್ಥಾನಮಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದರು.

ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಸಿ ವೇಣುಗೋಪಾಲ್ ರನ್ನು ರಾಜ್ಯ ಪ್ರವೇಶಕ್ಕೆ ಬಿಡುವುದಿಲ್ಲ ಎಂದ ಅವರು ವೇಣುಗೋಪಾಲ್ ಭಾಗವಹಿಸುವ ಎಲ್ಲಾ ಕಾರ್ಯಕ್ರಮಗಳಿಗೆ ಬಿಜೆಪಿ ಯಿಂದ ಮುತ್ತಿಗೆ ಹಾಕಲಾಗುವುದು ಎಂದರು. ಈ ಕುರಿತಂತೆ ಬಿಜೆಪಿ ಕಾರ್ಯಕರ್ತರಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಈ ಸಂದರ್ಭದಲ್ಲಿ ತಿಳಿಸಿದರು.