Connect with us

    LATEST NEWS

    ಉಡುಪಿ ಜಿಲ್ಲೆಯಲ್ಲಿ ಪತ್ತೆಯಾದ ಕೆಎಫ್ ಡಿ ಪ್ರಕರಣ

    ಉಡುಪಿ ಫೆಬ್ರವರಿ 24: ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದ ಮಂಗನ ಕಾಯಿಲೆ ಪ್ರಕರಣ ಇದೀಗ ಉಡುಪಿ ಜಿಲ್ಲೆಯಲ್ಲಿ ಕಂಡು ಬಂದಿದೆ. ಶುಕ್ರವಾರ ಶಿವಮೊಗ್ಗದಲ್ಲಿ 1, ಚಿಕ್ಕಮಗಳೂರು 4, ಉಡುಪಿಯಲ್ಲಿ 1 ಪಾಸಿಟಿವ್‌ ಬಂದಿದೆ.


    ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 58 ವರ್ಷದ ಮಹಿಳೆಗೆ ಮಂಗನ ಕಾಯಿಲೆ ದೃಢಪಟ್ಟಿದೆ. ಉಡುಪಿಯಲ್ಲಿ ಈ ವರ್ಷದ ಮೊದಲ ಪ್ರಕರಣ ಇದಾಗಿದೆ. ಈವರೆಗೆ 117 ಮಂದಿಗೆ ಪಾಸಿಟಿವ್‌ ಬಂದಿದ್ದು, 82 ಮಂದಿ ಗುಣಮುಖರಾಗಿ ಮೂವರು ಮೃತ ಪಟ್ಟಿದ್ದಾರೆ. 19 ಸಕ್ರಿಯ ಪ್ರಕರಣಗಳಿವೆ. ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 58 ವರ್ಷದ ಮಹಿಳೆಗೆ ಮಂಗನ ಕಾಯಿಲೆ ದೃಢಪಟ್ಟಿದೆ.

    ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಎಫ್ಡಿ ಸೋಂಕು ಹೇಗೆ ತಗಲಿತು ಎಂಬ ಬಗ್ಗೆ ಈ ಭಾಗದ ಆಸುಪಾಸಿನಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಕುಂದಾಪುರ ಭಾಗದಲ್ಲಿ ಹೆಚ್ಚಿನ ತಪಾಸಣೆ ಮಾಡಲಾಗುತ್ತಿದೆ. 2019ರಲ್ಲಿ ಒಂದು ಪ್ರಕ ರಣ ಕಂಡುಬಂದಿತ್ತು. ಆ ಬಳಿಕ ಯಾವುದೇ ಪ್ರಕರಣಗಳು ಕಂಡುಬಂದಿರಲಿಲ್ಲ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply