Connect with us

FILM

ಕೆಜಿಎಫ್ ಚಾಪ್ಟರ್ 2 ಅನಂತನಾಗ್ ಪಾತ್ರದಲ್ಲಿ ಕಾಣಿಸಿಕೊಂಡ ಪ್ರಕಾಶ್ ರಾಜ್

ಬೆಂಗಳೂರು ಅಗಸ್ಟ್ 26: ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಚಾಪ್ಟರ್ 2 ಚಿತ್ರದ ಶೂಟಿಂಗ್ ಇಂದಿನಿಂದ ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ ಹಾಕಿರುವ ಸೆಟ್ನಲ್ಲಿ ಆರಂಭಗೊಂಡಿದೆ.

ಈ ಬಾಲಿವುಡ್ ನಟ ಸಂಜಯ್ ದತ್, ನಟಿ ರವೀನಾ ಟಂಡನ್,  ಟಾಲಿವುಡ್ ನಟ ರಾವ್ ರಮೇಶ್ ಕೂಡ ನಟಿಸುತ್ತಿದ್ದಾರೆ. ಈಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ನಟಿಸುತ್ತಿದ್ದು ಈ ಬಗ್ಗೆ ಅವರೇ ಟ್ವಿಟ್ಟರ್ ನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಆದರೆ ಅವರು ನಿಭಾಯಿಸುತ್ತಿರುವ ಪಾತ್ರ ಯಾವುದು ಎಂಬುದು ಕುತೂಹಲ ಮೂಡಿಸಿದೆ. ಕೆಜಿಎಫ್ ಚಾಪ್ಟರ್ 1 ನಟ ಅನಂತನಾಗ್ ಅವರು ಪತ್ರಕರ್ತ ಆನಂದ್ ಇಂಗಳಗಿ ಪಾತ್ರದಲ್ಲಿ ನಟಿಸಿದ್ದರು,  ಮಾಲವಿಕ ಎದುರು ರಾಕಿ ಬಾಯ್ ಕಥೆಯನ್ನು ನಿರೂಪಿಸಿದರು, ಆದರೆ ಅನಂತನಾಗ್ ಮತ್ತು ಚಿತ್ರತಂಡ ನಡುವಿನ ಹೊಂದಾಣಿಕೆಯ ಕೊರತೆ ಪರಿಣಾಮ ಅವರು ಕೆಜಿಎಫ್ ಚಿತ್ರದಿಂದ ಹೊರನಡೆದಿದ್ದಾರೆ ಎಂಬ ಸುದ್ದಿ ಕೆಲವು ತಿಂಗಳ ಹಿಂದೆ ಹಬ್ಬಿತ್ತು. ಆದರೆ ಈ ಬಗ್ಗೆ ಹೊಂಬಾಳೆ ಫಿಲಂಸ್ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ, ಆದರೆ ಸಾಮಾಜಿಕ ಜಾಲತಾಣದಲ್ಲಿ ಎದ್ದಿದ್ದ ಸುದ್ದಿಗಳಿಗೆ ಪ್ರಕಾಶ್ ರಾಜ್ ಹಂಚಿಕೊಂಡಿರುವ ಫೋಟೋಗಳು ಈಗ ಉತ್ತರ ನೀಡುತ್ತಿದೆ.

ಮಾಳವಿಕಾ ಅವಿನಾಶ್ ಕೂಡ ಶೂಟಿಂಗ್ನಲ್ಲಿ ಪಾಲ್ಗೊಂಡಿದ್ದಾರೆ, ಆನಂದ ಇಂಗಳಗಿ ಪಾತ್ರದಲ್ಲಿ ಪ್ರಕಾಶ್ ರಾಜ್ ಕಾಣಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ,

ಆದರೆ ಚಿತ್ರತಂಡ ಮಾತ್ರ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ ಪ್ರಕಾಶ್ ಕೆಜಿಎಫ್ ಚಾಪ್ಟರ್ 2 ನಲ್ಲಿ ನಟಿಸುತ್ತಿರುವುದಾಗಿ ನಿರ್ದೇಶಕ ಪ್ರಶಾಂತ್ ನೀಲ್ ಟ್ವಿಟ್ಟರ್ನಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ.


ನಾವು ಕೊನೆಗೂ  ಶೂಟಿಂಗ್ ಆರಂಭಿಸಿದ್ದೇವೆ  ಪ್ರಕಾಶ್ ರಾಜ್ ಇದರಲ್ಲಿ ನಟಿಸುತ್ತಿದ್ದಾರೆ ನಮ್ಮ ಸಿನಿಮಾದ ಮೇಲೆ ಕುತೂಹಲ ಇಟ್ಟುಕೊಂಡಿರುವ ಮತ್ತು ಪ್ರೀತಿಸುತ್ತಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇವೆ ಎಂದು ಪ್ರಶಾಂತ್ ನೀಲ್ ಟ್ವೀಟ್ ಮಾಡಿದ್ದಾರೆ.