FILM
ಕರಾವಳಿಯಲ್ಲಿ ರಾಕಿಂಗ್ ಸ್ಟಾರ್ ಯಶ್ ಟೆಂಪಲ್ ರನ್..ಕಟೀಲು ಹಾಗೂ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ
ಮಂಗಳೂರು: ಎಪ್ರಿಲ್ 14 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿರುವ ಕೆಜಿಎಫ್ 2 ಚಿತ್ರದ ಯಶಸ್ಸಿಗಾಗಿ ರಾಕಿಂಗ್ ಸ್ಟಾರ್ ಯಶ್ ಕರಾವಳಿಯಲ್ಲಿ ಟೆಂಪಲ್ ರನ್ ಮಾಡುತ್ತಿದ್ದಾರೆ. ಈಗಾಗಲೇ ಕುಂದಾಪುರ ಆಸುಪಾಸಿನ ದೇವಾಲಯಗಳಲ್ಲಿ ದೇವರ ದರ್ಶನ ಪಡೆದ ಅವರು ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿಕೊಟ್ಟು ಕನಕ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಮಾಡಿದ್ದರು. ಈ ವೇಳೆ ನಿರ್ಮಾಪಕ ವಿಜಯ್ ಕಿರಂಗದೂರು ಸಹ ಇದ್ದು, ಕೃಷ್ಣನ ದರ್ಶನ ಪಡೆದುಕೊಂಡಿದ್ದರು.
ನಂತರ ದಕ್ಷಿಣಕನ್ನಡ ಜಿಲ್ಲೆಯ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಯಶ್ ಭೇಟಿ ನೀಡಿದರು. ಈ ವೇಳೆ ದೇವಸ್ಥಾನದ ವತಿಯಿಂದ ಯಶ್ ಅವರನ್ನು ವಿಶೇಷವಾಗಿ ಗೌರವಿಸಲಾಯಿತು. ದುರ್ಗಾಪರಮೇಶ್ವರಿಯ ಸನ್ನಿಧಿಯ ಮುಂದೆ ಕೆಲ ಹೊತ್ತು ಧ್ಯಾನದಲ್ಲಿ ಮಗ್ನರಾಗಿದ್ದ ಯಶ್ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ರು. ಯಶ್ ಅವರನ್ನು ಕಂಡು ಅಭಿಮಾನಿಗಳು ಸಹ ಖುಷಿಪಟ್ಟರು.