Connect with us

FILM

ಸ್ನೇಹಿತರಾದ ನಿಮಗೆಲ್ಲ ಒಂದು ಸಣ್ಣ ಮನವಿ: ಕಿಚ್ಚ ಸುದೀಪ್

ಬೆಂಗಳೂರು: ಇದೆ ಬುಧವಾರದಂದು ಕಿಚ್ಚ ಸುದೀಪ್ ಹುಟ್ಟುಹಬ್ಬವಿದ್ದು ,ಕೊರೊನಾ ಕಾರಣದಿಂದ ಈ ವರ್ಷದ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುವುದಿಲ್ಲ ಎಂದು ಕಿಚ್ಚ ಸುದೀಪ್ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ತಿಳಿಸಿದ್ದಾರೆ.

ಬುಧವಾರ 47 ವರ್ಷದ ಹುಟ್ಟುಹಬ್ಬವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳಿಗೆ ಭಾವನಾತ್ಮಕ ಪತ್ರವನ್ನು ಬರೆಯುವ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಪತ್ರದಲ್ಲಿ ಏನಿದೆ?
ಬಹಳ ವರ್ಷಗಳಿಂದ ನಿಮ್ಮನ್ನೆಲ್ಲಾ ಭೇಟಿಯಾಗುವುದು ಒಂದು ಸಂಸ್ಕೃತಿಯಂತಾಗಿದೆ. ಬೇರೆ ಯಾವುದೇ ಸಂತೋಷ ಅದನ್ನು ಬದಲಾಯಿಸಲು ಸಾಧ್ಯವಿಲ್ಲ. ಪತ್ರಿವರ್ಷ ಶುಭಾಶಯ ಕೋರಲು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದ ನಿಮ್ಮೊಂದಿಗೆ ಒಂದು ದಿನ ಪೂರ್ತಿ ಸಮಯ ಕಳೆಯುವ ಅವಕಾಶ ನನಗೆ ಸಿಗುತ್ತಿತ್ತು.

ಈ ವರ್ಷ ಸದ್ಯದ ಪರಿಸ್ಥಿತಿ ಸರಿಯಿಲ್ಲ. ಈ ಬಾರಿಯ ಹುಟ್ಟುಹಬ್ಬವನ್ನು ನಿಮ್ಮ ಜೊತೆ ಆಚರಣೆ ಮಾಡುತ್ತಿಲ್ಲ ಎಂದು ಹೇಳಲು ನಾನು ವಿಷಾದಿಸುತ್ತೇನೆ. ನಾನು ನಿಮ್ಮೆಲ್ಲರ ಹಾಗೂ ನನ್ನ ವಯಸ್ಸಾಗುತ್ತಿರುವ ಪೋಷಕರ ಆರೋಗ್ಯವನ್ನು ಗಮನದಲ್ಲಿಟ್ಟುಕೊಳ್ಳಬೇಕಾಗುತ್ತೆ. ಈ ಬಾರಿ ಹುಟ್ಟುಹಬ್ಬ ಆಚರಿಸಿದರೆ 10 ಹೆಜ್ಜೆ ಹಿಂದಿಟ್ಟು ಯಾವುದನ್ನು ತೊಲಗಿಸಲು ಪ್ರಯತ್ನಿಸುತ್ತಿದ್ದೇವೋ ಅದನ್ನು ಮತ್ತೆ ಆಮಂತ್ರಿಸಿದಂತೆ ಆಗುತ್ತದೆ.

ಕೋವಿಡ್ ಇನ್ನು ದೊಡ್ಡ ಬೆದರಿಕೆಯಾಗಿಯೇ ಇದೆ. ನಾವೆಲ್ಲರೂ ಕುಟುಂಬಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ನಿಮ್ಮ ಕುಟುಂಬದವರು ನಮ್ಮ ಕುಟುಂಬದವರು ಇದ್ದಂತೆ. ಅವರು ರೋಗಕ್ಕೆ ತುತ್ತಾಗಿ ಕಷ್ಟಪಟ್ಟರೆ, ನರಳುವ ಸುದ್ದಿ ಕೇಳಿದರೆ ನಿಮ್ಮಷ್ಟೇ ನನಗೂ ನೋವಾಗುತ್ತದೆ. ನಿಮ್ಮ ಶುಭಾಶಯಗಳು ನನಗೆ ಮುಖ್ಯವಾದದ್ದೇ ಹಾಗೂ ನಾನು ಹೇಳಿದಂತೆ ಬೃಹತ್ ಸಂಖ್ಯೆಯಲ್ಲಿ ಬರುವ ನಿಮ್ಮನ್ನು ಕಾಣುವ ಸಂತೋಷವನ್ನು ಬೇರೆ ಯಾವುದೂ ನನಗೆ ನೀಡುವುದಿಲ್ಲ.

ನಾನು ಖಚಿತವಾಗಿ ಹೇಳುತ್ತೇನೆ ಬಹಳ ಬೇಗ ಆ ದಿನವೂ ಬರುತ್ತದೆ ಹಾಗೂ ನಾವು ಮತ್ತೆ ಭೇಟಿಯಾಗುತ್ತೇವೆ. ಆದರೆ ಸದ್ಯಕ್ಕೆ ನಿಮ್ಮಲ್ಲಿ ಕೋರುವುದೇನೆಂದರೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಎಲ್ಲೂ ಹುಟ್ಟುಹಬ್ಬ ಆಚರಿಸಬೇಡಿ. ಯಾವುದೇ ಸಂಭ್ರಮಾಚರಣೆ ಹಾಗೂ ಕಾರ್ಯಕ್ರಮಗಳು ಬೇಡ. ಸಾಧ್ಯವಾದರೆ ನಿಮ್ಮ ಸುತ್ತಮುತ್ತಲಿನ ಪರಿಸರದ ಜನರಿಗೆ ಯಾವುದಾದರು ಸಹಾಯ ಮಾಡಿ.
ನಿಮ್ಮೆಲ್ಲರಿಗೂ ಧನ್ಯವಾದಗಳು.

ಒಂದೊಂದು ಸಲ ನಿಮ್ಮ ನಿರೀಕ್ಷೆಗಳಿಗೆ ತಕ್ಕಂತೆ ನಾನು ಇರುವುದಿಲ್ಲ. ಆ ರೀತಿ ಇರಲು ಖಂಡಿತವಾಗಿಯೂ ಪ್ರಯತ್ನ ಮಾಡುತ್ತೇನೆ. ನಿಮ್ಮನ್ನೆಲ್ಲಾ ಹೆಚ್ಚು ಮನೋರಂಜಿಸಲು ಯತ್ನಿಸುವೆ. ಕೋವಿಡ್ ಜೊತೆ ಯುದ್ಧ ಮುಗಿದ ನಂತರ ನಿಮ್ಮೊಂದಿಗೆ ಹೆಚ್ಚು ಸಮಯ ಕಳೆಯಲು ಯತ್ನಿಸುವೆ ಎಂದು ಕಿಚ್ಚ ಬರೆದುಕೊಂಡಿದ್ದಾರೆ

Share Information
Continue Reading
Advertisement
Click to comment

Leave a Reply

Your email address will not be published. Required fields are marked *