Connect with us

    LATEST NEWS

    ವಿಶ್ವದಲ್ಲೇ ಅತಿ ದೊಡ್ಡ ಕಿಡ್ನಿ ಸ್ಟೋನ್ ತೆಗೆದ ಕೆಎಂಸಿ ವೈದ್ಯರು…!!

    ಉಡುಪಿ ನವೆಂಬರ್ 25: ಮಹಿಳೆಯೊಬ್ಬರ ಮೂತ್ರಕೋಶದಲ್ಲಿದ್ದ ಅತಿದೊಡ್ಡ ಕಲ್ಲನ್ನು ಯಶಸ್ವಿಯಾಗಿ ತೆಗೆಯಲು ಮಣಿಪಾಲ ಕಸ್ತೂರ ಬಾ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದು, ಇದು ವಿಶ್ವದಲ್ಲೇ ಮಹಿಳಾ ರೋಗಿಯೊಬ್ಬರ ಮೂತ್ರಕೋಶದಿಂದ ಹೊರತೆಗೆಯಲಾಗಿರುವ ಅತಿದೊಡ್ಡ ಕಲ್ಲು ಇದಾಗಿದೆ ಎಂದು ಕೆಎಂಸಿ ವೈದ್ಯರು ತಿಳಿಸಿದ್ದಾರೆ.


    60 ವರ್ಷದ ಮಹಿಳೆ ಕಳೆದ 6 ವರ್ಷಗಳಿಂದ ಉರಿ ಮೂತ್ರ ಸಮಸ್ಯೆಯಿಂದ ಬಳಲುತ್ತಿದ್ದು ಮೂತ್ರನಾಳದ ಸೋಂಕಿಗೆ ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ. ಸಮಸ್ಯೆ ಉಲ್ಭಣಗೊಂಡು ಈಚೆಗೆ ಮಣಿಪಾಲದ ಕಸ್ತೂರಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಾಗಿದ್ದರು. ರೋಗಿಗೆ ಸರಳ ಸಿ.ಟಿ ಸ್ಕ್ಯಾನ್ ಮಾಡಿದಾಗ ಮೂತ್ರಕೋಶವನ್ನು ಆವರಿಸಿಕೊಂಡಿರುವ ದೊಡ್ಡ ಕಲ್ಲು ಪತ್ತೆಯಾಯಿತು. ಮೂತ್ರಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕ ಡಾ ಪದ್ಮರಾಜ್ ಹೆಗ್ಡೆ ಮಾರ್ಗದರ್ಶನದಲ್ಲಿ 11.5 x 7.5 ಸೆಂ.ಮೀ ಅಳತೆಯ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲನ್ನು ಯಶಸ್ವಿಯಾಗಿ ಹೊರ ತೆಗೆಯಲಾಗಿದೆ.

    ಡಾ.ಅಂಶುಮನ್, ಡಾ.ಕಾಶಿ ವಿಶ್ವನಾಥ್, ಡಾ.ನಿಶಾ, ಡಾ.ವಿವೇಕ್ ಪೈ ಮತ್ತು ಡಾ.ಕೃಷ್ಣ ಅವರನ್ನೊಳಗೊಂಡ ತಂಡ ತೆರೆದ ಸಿಸ್ಟೊಲಿಥೊಟಮಿ ಶಸ್ತ್ರಚಿಕಿತ್ಸೆ ಮೂಲಕ ಕಲ್ಲನ್ನು ಹೊರತೆಗೆದಿದ್ದು ರೋಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಮಹಿಳಾ ರೋಗಿಯಲ್ಲಿ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲು ಪತ್ತೆಯಾಗಿರುವುದು ವಿಶ್ವದಲ್ಲಿ ಇದೇ ಮೊದಲು. ಹಿಂದೆ ಮುಂಬೈನ ಕೆಇಎಂ ಆಸ್ಪತ್ರೆಯಲ್ಲಿ 528 ಗ್ರಾಂ ಮೂತ್ರಕೋಶದ ಕಲ್ಲು ಪತ್ತೆಯಾಗಿತ್ತು ಎಂದು ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಅಪರೂಪದ ಕ್ಲಿಷ್ಟಕರ ಶಸ್ತ್ರಚಿಕಿತ್ಸಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿದ ತಂಡಕ್ಕೆ ಮಾಹೆ ಮಣಿಪಾಲದ ಭೋದನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ.ಆನಂದ್ ವೇಣುಗೋಪಾಲ್ ಅಭಿನಂದಿಸಿದ್ದಾರೆ

    Share Information
    Advertisement
    Click to comment

    Leave a Reply

    Your email address will not be published. Required fields are marked *