Connect with us

    KARNATAKA

    ಮಾಂಸ ಭಕ್ಷಣೆಗೆ ನವಿಲುಗಳ ಸಂಹಾರ, ಮೂವರ ಬಂಧನ..!

    ತುಮಕೂರು: ರಾಜ್ಯದಲ್ಲಿ ಹುಲಿ ಉಗುರು ಸದ್ದು ಮಾಡುತ್ತಿರುವ ಬೆನ್ನಲ್ಲೇ ರಾಷ್ಟ್ರಪಕ್ಷಿ ನವಿಲು ಮಾಂಸ (Peacock meat) ಭಕ್ಷಣೆಗೆ ಮುಂದಾಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

    ತುಮಕೂರಿನ (Tumkur News) ಮಾರನಾಯಕನಪಾಳ್ಯದಲ್ಲಿ ಈ ಘಟನೆ ನಡೆದಿದೆ.

    ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತ ಆರೋಪಿಗಳಾಗಿದ್ದು, ಇವರೆಲ್ಲವೂ ಒರಿಸ್ಸಾ ಮೂಲದವರಾಗಿದ್ದಾರೆ. ಮಾರನಾಯಕನಪಾಳ್ಯದ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಇವರುಗಳು ನವಿಲು ಮಾಂಸ ಗಟ್ಟಿಯಾಗಿದ್ದು, ರುಚಿಯಾಗಿ ಇರುತ್ತದೆ ಎಂದು ಬೇಟೆಯಾಡುತ್ತಿದ್ದರು.

    ಕಳೆದ ಹಲವು ದಿನಗಳಿಂದ ನವಿಲುಗಳನ್ನು ಕೊಂದು ತಿನ್ನುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ 1.5 ಕೆ.ಜಿ ನವಿಲಿನ ಹಸಿ ಮಾಂಸ, ನವಿಲಿನ ಎರಡು ಕಾಲುಗಳು, ಬೇಯಿಸಿದ ಮಾಂಸ ಹಾಗೂ ನವಿಲು ಹಿಡಿಯಲು ಬಳಸುತ್ತಿದ್ದ ಬಲೆಗಳು, ಉರುಳುಗಳು, ಮಾಂಸ ಬೇಯಿಸಿದ್ದ ಪಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ.ವಶಕ್ಕೆ ಪಡೆದ ಮಾಂಸವನ್ನು ಅರಣ್ಯಾಧಿಕಾರಿಗಳು ಎಫ್ಎಸ್ಎಲ್‌ಗೆ ಕಳುಹಿಸಿದ್ದಾರೆ. ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಅಧಿಕಾರಿಗಳು ತನಿಖೆಯನ್ನು ಮುಂದುವರಿಸಿದ್ದಾರೆ’
    .

    Share Information
    Advertisement
    Click to comment

    Leave a Reply

    Your email address will not be published. Required fields are marked *