Connect with us

BELTHANGADI

ಉಡವನ್ನು ಬೇಟೆಯಾಡಿದ ಬೃಹತ್ ಕಾಳಿಂಗ ಸರ್ಪ ಸೆರೆ…..!!

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಕಡಂಬು ಎಂಬಲ್ಲಿ ಯುವ ಉದ್ಯಮಿ ಶಶಿರಾಜ್ ಶೆಟ್ಟಿ ಅವರ ಮನೆಯ ಹಿಂಭಾಗ ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಸೆರೆ ಹಿಡಿಯಲಾಯಿತು.


ಉದ್ಯಮಿ ಶಶಿರಾಜ್ ಶೆಟ್ಟಿ ಯವರ ಮನೆಯ ಹಿಂಭಾಗದಲ್ಲಿ ದೊಡ್ಡ ಗಾತ್ರದ ಉಡವನ್ನು ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಬೇಟೆಯಾಡುವುದನ್ನು ಗಮನಿಸಿ ಸ್ನೇಕ್ ಅಶೋಕ್ ಕುಮಾರ್ ಲಾಯಿಲ ಅವರಿಗೆ ಮಾಹಿತಿ ನೀಡಿದರು.

ತಕ್ಷಣ ಆಗಮಿಸಿದ ಸ್ನೇಕ್ ಅಶೋಕ್ ಕುಮಾರ್ ಅವರು ಕಾಳಿಂಗ ಸರ್ಪವನ್ನು ಹಿಡಿಯುವ ಸಂದರ್ಭದಲ್ಲಿ ಕಾಳಿಂಗ ಸರ್ಪ ಅವರ ಮೇಲೆರಗಿದ ಘಟನೆಯು ನಡೆಯಿತು. ಆದರೂ ಅತ್ಯಂತ ಸಾಹಸದಿಂದ ಅಂತಿಮವಾಗಿ ಕಾಳಿಂಗ ಸರ್ಪವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.

https://youtu.be/TesM3oiBZs0

Share Information
Continue Reading
Advertisement
Click to comment

Leave a Reply

Your email address will not be published. Required fields are marked *