FILM
ಇನ್ನುಮುಂದೆ ಕರಿಮಣಿ ಮಾಲೀಕ ನಾನಲ್ಲ…. ಕಿರಿಕ್ ಕೀರ್ತಿ ಅರ್ಪಿತಾ ಡೈವೋರ್ಸ್…!!

ಬೆಂಗಳೂರು ಅಗಸ್ಟ್ 19: ಮಾಜಿ ಬಿಗ್ ಬಾಸ್ ಸ್ಪರ್ಧಿ ಪತ್ರಕತ್ರ ಕಿರಿಕ್ ಕೀರ್ತಿ ತಮ್ಮ ವೈವಾಹಿಕ ಜೀವನ ಮುಕ್ತಾಯಗೊಂಡಿರುವುದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಬಹಿರಂಗ ಪಡಿಸಿದ್ದಾರೆ.
ಇತ್ತೀಚೆಗೆ ಹಲವಾರು ವಿಚಾರಗಳಲ್ಲಿ ಕಿರಿಕ್ ಕೀರ್ತಿ ಸುದ್ದಿಯಲ್ಲಿದ್ದು, ಎರಡು ದಿನಗಳ ಹಿಂದೆ ವಿಡಿಯೋ ಮಾಡಿ ತನ್ನ ಮೇಲಾಗುತ್ತಿರುವ ಟ್ರೋಲ್ ಬಗ್ಗೆ ಅಸಮಧಾನ ಹೊರ ಹಾಕಿದ್ದರು, ಇದೀಗ ತಮ್ಮ ಇಂದು ವಿಚ್ಛೇದನ ಕುರಿತು ಮಾಹಿತಿ ಪ್ರಕಟಿಸಿದ್ದಾರೆ. ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜತೆಗಿನ ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ.

ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯಾವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲ. ಕಾರಣ ಇಷ್ಟೇ.. ಅಧಿಕೃತವಾಗಿ ಇನ್ನುಮುಂದೆ ಕರಿಮಣಿ ಮಾಲೀಕ ನಾನಲ್ಲ. ಒಂದೊಳ್ಳೆಯ ಬದುಕು ಅವಳಿಗೂ ಸಿಗಲಿ, ಕಹಿನೆನಪುಗಳು ಮರೆತು ಹೊಸಜೀವನಕ್ಕೆ ನಾಂದಿ ಹಾಡಲಿ, ನನಗೂ ನಿಮ್ಮ ಪ್ರೀತಿ ಹಾರೈಕೆ ಮುಂದುವರಿಯಲಿ ಎಂದು ಕಿರಿಕ್ ಕೀರ್ತಿ ತಮ್ಮ ವಿಚ್ಛೇದನವನ್ನು ಪ್ರಕಟಿಸಿದ್ದಾರೆ.