Connect with us

LATEST NEWS

ಸೋತ ಬೆನ್ನಲೆ ಕೆಎಲ್ ರಾಹುಲ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಮಾತಿನ ಚಕಮಕಿ

ಲಕ್ನೋ ಮೇ 09: ಈ ಬಾರಿಯ ಐಪಿಎಲ್ ನಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ನಿನ್ನೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಹೀನಾಯ ಸೋಲು ಅನುಭವಿಸಿದೆ. ಈ ನಡುವೆ ಸೊಲೀನ ಬಳಿಕ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೊಯೆಂಕಾ ಮತ್ತು ನಾಯಕ ಕೆಎಲ್ ರಾಹುಲ್ ನಡುವೆ ನಡೆದ ಮಾತಿನ ಚಕಮಕಿಯ ವಿಡಿಯೋ ವೈರಲ್ ಆಗಿದೆ.


ಈ ಪಂದ್ಯದಲ್ಲಿ ಲಕ್ನೋ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ, ಗಳಿಸಿದ್ದು 164 ರನ್‌ಗಳನ್ನು ಮಾತ್ರ. ನಾಯಕ ರಾಹುಲ್ 33 ಎಸೆತಗಳಲ್ಲಿ 29 ರನ್ ಗಳಿಸಿದರು. ಆಯುಷ್ ಬದೋನಿ 30 ಎಸೆತಗಳಲ್ಲಿ 55 ಮತ್ತು ನಿಕೋಲಸ್ ಪೂರನ್ 26 ಎಸೆತಗಳಲ್ಲಿ 48 ರನ್‌ ಗಳಿಸಿದರು. ಇದಕ್ಕೆ ಉತ್ತರವಾಗಿ ಟ್ರಾವಿಸ್ ಹೆಡ್ 30 ಎಸೆತಗಳಲ್ಲಿ 89 ರನ್ ಮತ್ತು ಅಭಿಷೇಕ್ ಶರ್ಮಾ 28 ಎಸೆತಗಳಲ್ಲಿ 75 ರನ್ ಸಿಡಿಸಿ ಸ್ಫೋಟಕ ಬ್ಯಾಟಿಂಗ್ ಮಾಡಿ 9.4 ಓವರ್‌ಗಳಲ್ಲಿ 62 ಎಸೆತಗಳು ಬಾಕಿ ಇರುವಂತೆಯೇ ಮೊತ್ತವನ್ನು ಬೆನ್ನಟ್ಟುವ ಮೂಲಕ ಹೈದರಾಬಾದ್ ಅಮೋಘ ಜಯ ಕಂಡಿತು. ಈ ಜಯದೊಂದಿಗೆ ಎಸ್​ಆರ್​ಹೆಚ್ ಆಡಿದ 12 ಪಂದ್ಯಗಲ್ಲಿ ಏಳು ಜಯ ಮತ್ತು ಐದರಲ್ಲಿ ಸೋಲು ಕಂಡು 14 ಅಂಕ ಸಂಪಾದಿಸಿ ಮೂರನೇ ಸ್ಥಾನಕ್ಕೆ ಜಿಗಿದಿದೆ.

 

ಹೀನಾಯ ಸೋಲಿನ ನಂತರ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೊಯೆಂಕಾ ಕೋಪಗೊಂಡಿದ್ದಾರೆ. ತಂಡ ನೀಡಿದ ಪ್ರದರ್ಶನದಿಂದ ಅಸಮಾಧಾನಗೊಂಡಂತೆ ಕಂಡುಬಂತು. ಸಂಜೀವ್ ಅವರು ನಾಯಕ ಕೆಎಲ್ ರಾಹುಲ್ ಅವರೊಂದಿಗೆ ಕೋಪದಲ್ಲಿ ಮಾತನಾಡುತ್ತಿರುವುದು ಕಂಡುಬಂದಿದೆ. ಇವರಿಬ್ಬರ ನಡುವಣ ಮಾತುಕತೆ ಏನು ಎಂಬುದು ಸ್ಪಷ್ಟವಾಗಿ ಕೇಳಿಸಿಲ್ಲವಾದರೂ, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವಿಡಿಯೋವನ್ನು ಗಮನಿಸಿರುವ ನೆಟ್ಟಿಗರು ಇವರಿಬ್ಬರು ಜಗಳ ಆಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *