Connect with us

LATEST NEWS

ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಅಪಘಾತಕ್ಕೆ ಬಲಿ

ಕುಂದಾಪುರ ಡಿಸೆಂಬರ್ 9: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಸಿದ್ದಾಪುರ ಬಳಿ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.


ಶಂಕರನಾರಾಯಣದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮರಳುವಾಗ ಹಾಲಾಡಿ ಬಳಿ ಸೇತುವೆಗೆ ಅವರ ಕಾರು ಡಿಕ್ಕಿ ಹೊಡೆದಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಿ ಮೃತಪಟ್ಟಿದ್ದಾರೆ.


ಹೈನುಗಾರಿಕೆ, ಅಡಿಕೆ, ತೆಂಗು, ಬಾಳೆ, ರಬ್ಬರ್, ತಾಳೆ, ಕಾಳುಮೆಣಸು ಕೃಷಿ ಮಾಡುತ್ತಿದ್ದ ಅವರು ಪ್ರಗತಿಪರ ಕೃಷಿಕರಾಗಿದ್ದರು. ಸಹಕಾರಿ ಸಂಘಗಳು, ಗ್ರಾಮ ಪಂಚಾಯಿತಿ ಚುನಾವಣೆ, ಸಂಘಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು, ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು.

Facebook Comments

comments