LATEST NEWS
ಕೊಡಚಾದ್ರಿ ಬಳಿ ಜೀಪ್ ಮತ್ತು ಟಿಟಿ ನಡುವೆ ಮುಖಾಮುಖಿ ಡಿಕ್ಕಿ – ಮೂವರಿಗೆ ಗಂಭೀರ ಗಾಯ
ಶಿವಮೊಗ್ಗ ಡಿಸೆಂಬರ್ 26: ಟಿಟಿ ಹಾಗೂ ಜೀಪ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 8 ಮಂದಿ ಗಾಯಗೊಂಡ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪ ನಡೆದಿದೆ.
ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್‌ಗೆ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿಟಿ ವಾಹನ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿವೆ. ಪರಿಣಾಮ ಜೀಪ್‌ನಲ್ಲಿದ್ದ 8 ಜನಗಾಯಗೊಂಡಿದ್ದಾರೆ. ಇದರಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಕೇರಳದಿಂದ ಕೊಲ್ಲೂರು ಮೂಕಾಂಬಿಕೆಯ ದರ್ಶನಕ್ಕೆ ಬಂದಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.