LATEST NEWS
ಕೊಡಚಾದ್ರಿ ರೋಪ್ ವೇ ನಿರ್ಮಾಣಕ್ಕೆ ಸರ್ವೆ ಕಾರ್ಯ ಆರಂಭ
ಉಡುಪಿ ಸೆಪ್ಟೆಂಬರ್ 15: ದಕ್ಷಿಣ ಭಾರತದ ಪ್ರಸಿದ್ಧ ದೇವಿಯ ಕ್ಷೇತ್ರವಾದ ಉಡುಪಿಯ ಕೊಲ್ಲೂರು ಶ್ರೀ ಮೂಕಾಂಬಿಕೆ ಕ್ಷೇತ್ರದಿಂದ ಕೊಡಚಾದ್ರಿಗೆ ತೆರಳಲು ರೋಪ್ ವೇ ನಿರ್ಮಾಣ ಪ್ರಸ್ತಾವನೆಗೆ ಮತ್ತೆ ಜೀವ ಬಂದಿದೆ.
ಪ್ರವಾಸಿಗರು ತೆರಳಲು ಅತ್ಯಾಧುನಿಕ ಮಾದರಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ರೋಪ್ ವೇ ಕಾಮಗಾರಿಯ ಡಿ.ಪಿ.ಆರ್. ಸರ್ವೇ ಕಾರ್ಯಕ್ಕೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಬೈಂದೂರು ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಚಾಲನೆ ನೀಡಿದರು.
ದೇಶದಲ್ಲಿಯೇ ಅತೀ ಉದ್ದದ ರೋಪ್ ವೇ ಇದಾಗಿದ್ದು ಯುರೋಪ್ ಮಾದರಿಯಲ್ಲಿ ನಿರ್ಮಿಸಲಾಗುತ್ತದೆ. ಇ.ಪಿ.ಐ.ಎಲ್ ಕಂಪೆನಿ ಈ ಸರ್ವೇ ಕಾರ್ಯ ನಡೆಸಲಿದೆ. ಈ ವೇಳೆ ಮಾತನಾಡಿದ ಶಾಸಕ ಸುಕುಮಾರ್ ಶೆಟ್ಟಿ, ಕೊಲ್ಲೂರು- ಕೊಡಚಾದ್ರಿ ರೋಪ್ ವೇ ಬಹುದಿನಗಳ ಕನಸಾಗಿದ್ದು ಇದರಿಂದ ಪ್ರವಾಸೋದ್ಯಮ ಇನ್ನಷ್ಟು ವೃದ್ಧಿಸುತ್ತದೆ. ಯಾವುದೇ ಕಾರಣಕ್ಕೂ ಪರಿಸರ, ಅರಣ್ಯಗಳಿಗೆ ಹಾನಿಯಾಗದಂತೆ ವೈಜ್ಞಾನಿಕ ರೀತಿಯ ಕಾಮಗಾರಿ ನಡೆಸಲಾಗುತ್ತದೆ.
ರೋಪ್ ವೇ ನಿರ್ಮಾಣದಿಂದ ಕೊಲ್ಲೂರು ಭಾಗದ ಬಾಡಿಗೆ ಜೀಪು ಚಾಲಕರಿಗೆ ಸಮಸ್ಯೆಯಾಗುವುದಿಲ್ಲ. ಬದಲಾಗಿ ರೋಪ್ ವೇ ಆರಂಭವು ನಿರ್ದಿಷ್ಟ ಪ್ರದೇಶದಲ್ಲಿ ಆಗುವುದರಿಂದ ಜೀಪುಗಳ ಅವಶ್ಯಕತೆ ಮುಂದೆಯೂ ಇರಲಿದೆ ಎಂದರು.
Facebook Comments
You may like
-
ಪುದುಚೇರಿ ಮುಖ್ಯಮಂತ್ರಿ ನಾರಾಯಣಸ್ವಾಮಿ ಕೊಲ್ಲೂರು ದೇವಸ್ಥಾನ ಭೇಟಿ
-
ರಾಜ್ಯದ ಅತೀ ಶ್ರೀಮಂತ ದೇವಾಲಯದ ಆದಾಯ ನಾಲ್ಕು ತಿಂಗಳಲ್ಲಿ ಕೇವಲ 4 ಕೋಟಿ
-
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆನೆಯ ವರ್ಷದ ಪುಣ್ಯ ಸ್ಮರಣೆ
-
ಬರೋಬ್ಬರಿ 77 ದಿನಗಳ ನಂತರ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಭಕ್ತರು
-
ಕೊಲ್ಲೂರಿಗೆ ಬರಬೇಡಿ ಮನೆಯಲ್ಲೇ ಪ್ರಾರ್ಥಿಸಿ – ಕೊಲ್ಲೂರು ದೇವಸ್ಥಾನ ಮಂಡಳಿ
-
ಮುಜರಾಯಿ ಇಲಾಖೆಯ ಮಹತ್ವದ ಕಾರ್ಯಕ್ರಮ ಉಚಿತ ಸಾಮೂಹಿಕ ವಿವಾಹದ ಆಮಂತ್ರಣ ಪತ್ರಿಕೆ ಬಿಡುಗಡೆ
You must be logged in to post a comment Login