KARNATAKA
ಪೊನ್ನಂಪೇಟೆ – ಮಗು ಸೇರಿದಂತೆ ನಾಲ್ವರ ಬರ್ಬರ ಕೊಲೆ

ಕೊಡಗು ಮಾರ್ಚ್ 28: ಕಟುಕ ಪತಿಯೊಬ್ಬ ತನ್ನ ಪತ್ನಿ ಮತ್ತು ತನ್ನ 6 ವರ್ಷದ ಮಗು ಸೇರಿ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ ಕರಿಯ (75), ಗೌರಿ (70), ನಾಗಿ (35) ಹಾಗೂ 6 ವರ್ಷ ಕಾವೇರಿ ಜೀವ ಕಳೆದುಕೊಂಡಿದ್ದಾರೆ. ಗಿರೀಶ್ (35) ಎನ್ನುವ ಆರೋಪಿ ನಾಲ್ವರಿಗೆ ಕತ್ತಿಯಿಂದ ಹೊಡೆದು ಹತ್ಯೆ ಮಾಡಿದ್ದಾನೆ.
ನಾಲ್ವರ ಜೀವ ತೆಗೆದಿರುವ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊನ್ನಂಪೇಟೆ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ. ಘಟನೆ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿ ಪರಾರಿಯಾಗಿದ್ದು ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ನಾಗಿಯೊಂದಿಗೆ ಗಿರೀಶ್ 3ನೇ ಮದುವೆಯಾಗಿ ತೋಟದ ಮನೆಯಲ್ಲಿ ಜೀವನ ನಡೆಸುತ್ತಿದ್ದನು. ಸದ್ಯ ಈ ಕುಟುಂಬದ ಕುರಿತು ಖಚಿತ ಮಾಹಿತಿಯನ್ನು ಪಡೆಯಲಾಗುತ್ತಿದೆ. ಮಧ್ಯಾಹ್ನವಾದರೂ ಕೂಲಿ ಕೆಲಸಕ್ಕೆ ಬಂದಿಲ್ಲದಿರುವುದನ್ನು ಗಮನಿಸಿ ಮನೆಯ ಬಳಿ ಬಂದ ಇತರ ಕಾರ್ಮಿಕರು ಮಾಹಿತಿ ನೀಡಿದರು. ಸ್ಥಳಕ್ಕೆ ಬಂದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಧಾವಿಸಿದ್ದಾರೆ.

1 Comment