Connect with us

    LATEST NEWS

    ಒನ್ ಡೇ ಕ್ರಿಕೆಟ್ ನಲ್ಲಿ ಶತಕಗಳ ಅರ್ಧ ಶತಕ ಸಿಡಿಸಿದ ವಿರಾಟ್ ಕೊಹ್ಲಿ – ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ದಾಖಲೆ ನುಚ್ಚುನೂರು

    ಮುಂಬೈ ನವೆಂಬರ್ 15 : ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸಚಿನ್ ದಾಖಲೆ ಮುರಿಯುವವರು ಯಾರಾದರೂ ಇದ್ದರೆ ಅದು ವಿರಾಟ್ ಕೊಹ್ಲಿ ಮಾತ್ರ ಎಂದಿದ್ದ ಸಚಿನ್ ಮಾತನ್ನು ಇದೀಗ ಸತ್ಯ ಮಾಡಿದ್ದು, ಇಂದು ನಡೆದ ವರ್ಲ್ಡ್ ಕಪ್ ನ ಸೆಮಿಪೈನಲ್ ಮ್ಯಾಚ್ ನಲ್ಲಿ 50ನೇ ಶತಕ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ದಾಖಲೆಯನ್ನ ನುಚ್ಚುನೂರು ಮಾಡಿದ್ದಾರೆ.


    ಬುಧವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್‌ ವಿರುದ್ಧ ನಡೆದ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಕೊಹ್ಲಿ ಶತಕ ಸಿಡಿಸಿ ಮೆರೆದಾಡಿದ್ದಾರೆ.


    ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ಕೋಲ್ಕತ್ತಾದ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ ತಮ್ಮ 35ನೇ ವರ್ಷದ ಹುಟ್ಟುಹಬ್ಬದ ದಿನದಂದೇ ಶತಕ ಸಿಡಿಸಿ ಸಚಿನ್‌ ತೆಂಡೂಲ್ಕರ್‌ ಅವರ 49 ಶತಕಗಳ ದಾಖಲೆಯನ್ನ ಸರಿಗಟ್ಟಿದ್ದರು. ಸಚಿನ್‌ ತೆಂಡೂಲ್ಕರ್‌ 452 ಇನ್ನಿಂಗ್ಸ್‌ಗಳಲ್ಲಿ 49 ಶತಕಗಳನ್ನು ಸಿಡಿಸಿದ್ದರೆ, ಕೊಹ್ಲಿ ಕೇವಲ 277 ಇನ್ನಿಂಗ್ಸ್‌ಗಳಲ್ಲೇ ಈ ಸಾಧನೆ ಮಾಡಿ ಸೈ ಎನಿಸಿಕೊಂಡಿದ್ದರು. ಬುಧವಾರ ನ್ಯೂಜಿಲೆಂಡ್‌ ವಿರುದ್ಧದ ಪಂದ್ಯದಲ್ಲಿ 106 ಎಸೆತಗಳಲ್ಲಿ 8 ಬೌಂಡರಿ 1 ಸಿಕ್ಸರ್‌ನೊಂದಿಗೆ ಶತಕ ಸಿಡಿಸಿ ವಿಶ್ವದಾಖಲೆ ಬರೆದಿದ್ದಾರೆ.


    ಕಿವೀಸ್‌ ವಿರುದ್ಧ ಶತಕ ಸಿಡಿಸುವ ಮೂಲಕ ವಿರಾಟ್‌ ಕೊಹ್ಲಿ ತಮ್ಮ ವೃತ್ತಿಜೀವನದ 80ನೇ ಶತಕ ಪೂರೈಸಿದ್ದಾರೆ. ಈ ಪೈಕಿ ಟೆಸ್ಟ್‌ ಕ್ರಿಕೆಟ್‌ನಲ್ಲಿ 29, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 1 ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಒಟ್ಟು 50 ಶತಕ ಸಿಡಿಸಿದ್ದಾರೆ. ಇನ್ನೂ 49 ಶತಕಗಳನ್ನು ಸಿಡಿಸಿರುವ ಸಚಿನ್‌ ತೆಂಡೂಲ್ಕರ್‌ 2ನೇ ಸ್ಥಾನಕ್ಕೆ ಕುಸಿದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply