ಕೋಲಾರ ನವೆಂಬರ್ 24: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪ್ಲೈಓವರ್ ತಡೆಗೊಡೆಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಘಟನೆ ಸೋಮವಾರ ಬೆಳಗಿನ ಜಾವ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಅಪಘಾತದಲ್ಲಿ ನಾಲ್ವರು ಯುವಕರು ಸಾವನಪ್ಪಿದ್ದಾರೆ.

ಗೋಪಿ(38), ಗೌತಮ್ ರಮೇಶ್ (28), ಹರಿಹರನ್ (27), ಜಯಂಕರ್ (30) ಮೃತ ಯುವಕರು. ಮೃತರೆಲ್ಲರೂ ಚೆನ್ನೈ ಮೂಲದವರು.
ಅಪಘಾತ ಬೆಳಗಿನ ಜಾವ 2.15 ರಿಂದ 2.30ರ ನಡುವೆ ಸಂಭವಿಸಿದೆ. ಅಪಘಾತದಲ್ಲಿ ಸಾವಿಗೀಡಾದವರೆಲ್ಲರೂ ಸ್ನೇಹಿತರಾಗಿದ್ದು, ಕೇರಳದ ಶಬರಿಮಲೆಗೆ ಕಾರಿನಲ್ಲಿ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ, ಚಾಲಕ ಅತಿ ವೇಗವಾಗಿ ಕಾರು ಚಾಲನೆ ಮಾಡುತ್ತಿದ್ದರಿಂದ ಅಪಘಾತ ಸಂಭವಿಸಿದೆ. ಕಾರು ಫ್ಲೈಓವರ್‌ನ ತಡೆಗೋಡೆಗೆ ಡಿಕ್ಕಿ ಹೊಡೆದಿದೆ ಮತ್ತು ಕೆಳಗೆ ಬಿದ್ದಿದೆ ಎಂದು ಹೇಳಲಾಗಿದೆ. ಅಪಘಾತದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ, ಕಾರು ಮತ್ತು ಅದರಲ್ಲಿದ್ದವರು ಸುಮಾರು 100 ಮೀಟರ್ ಆಳದ ಅಂಡರ್‌ಪಾಸ್‌ಗೆ ಬಿದ್ದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.



