Connect with us

KARNATAKA

ಕೋಲಾರ – ಶತಾಬ್ದಿ ಎಕ್ಸ್ ಪ್ರೆಸ್ ಗೆ ಸಿಲುಕಿ ಓರ್ವ ಪ್ರಯಾಣಿಕ ಸಾವು

ಕೋಲಾರ ಮಾರ್ಚ್ 09: ರೈಲ್ವೆ ಟ್ರ್ಯಾಕ್ ಮೇಲೆ ನಿಂತಿದ್ದ ಪ್ರಯಾಣಿಕನ ಮೇಲೆ ಶತಾಬ್ದಿ ಎಕ್ಸ್ ಪ್ರೇಸ್ ರೈಲು ಹರಿದ ಪರಿಣಾಮ ಓರ್ವ ಸಾವನಪ್ಪಿದ್ದು, ಮತ್ತೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕೋಲಾರದ ಮಾಲೂರು ತಾಲೂಕಿನ ಟೇಕಲ್ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.


ಟೇಕಲ್ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ ಮಾರಿಕುಪ್ಪಂ-ಎಸ್ ಬಿಎಸ್ ಮತ್ತು ಕುಪ್ಪಂ ಮತ್ತು ಎಸ್ ಬಿಸಿ ರೈಲುಗಳು ಮಾರ್ಗ ಮಧ್ಯೆ ನಿಂತಿದ್ದವು. ಈ ವೇಳೆ ರೈಲಿನಲ್ಲಿದ್ದ ಪ್ರಯಾಣಿಕರು ಕೆಳಗೆ ಇಳಿದು ಮಧ್ಯದಲ್ಲಿದ್ದ ರೈಲ್ವೆ ಹಳಿ ಮೇಲೆ ನಿಂತಿದ್ದಾರೆ.
ಈ ವೇಳೆ ಬೆಂಗಳೂರು-ಚೆನ್ನೈ ಶತಾಬ್ದಿ ಎಕ್ಸ್‌ಪ್ರೆಸ್‌ ರೈಲು ವೇಗವಾಗಿ ನುಗ್ಗಿ ಬಂದಿದ್ದು, ಪ್ರಯಾಣಿಕರು ಬಚಾವ್​ ಆಗಲು ಯತ್ನಿಸುವ ವೇಳೆಗೆ ಡಿಕ್ಕಿ ಹೊಡೆದಿದೆ. ಲೋಕೋ ಪೈಲಟ್ ಸತತವಾಗಿ ಹಾರ್ನ್ ಮಾಡುತ್ತಿದ್ದರೂ ಕೂಡ ಜನ ಹಳಿ ಮೇಲೆ ನಿಂತಿದ್ದರು. ಹೀಗಾಗಿ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ.


ಟೇಕಲ್ ಹೊರಠಾಣೆ, ಬಂಗಾರಪೇಟೆ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಮೃತನನ್ನು 24 ವರ್ಷದ ಕಾಲ್ ಸೆಂಟರ್ ಉದ್ಯೋಗಿ ಶಾಬಾಜ್ ಅಹ್ಮದ್ ಷರೀಫ್ ಎಂದು ಗುರುತಿಸಲಾಗಿದ್ದು, ಈತ ಬಂಗಾರಪೇಟೆ ನಿವಾಸಿ ಎನ್ನಲಾಗಿದೆ. ಶಬಾಜ್ ಅಹ್ಮದ್ ಷರೀಫ್ ಬೆಂಗಳೂರಿನ ರಾಜಾಜಿನಗರದಲ್ಲಿರುವ ವಿಂಧ್ಯಾ ಇನ್ಫೋಟೆಕ್ ಸಲ್ಯೂಷನ್ಸ್‌ನಲ್ಲಿ ಉದ್ಯೋಗಿಯಾಗಿದ್ದರು. ಷರೀಫ್ ಅವಿವಾಹಿತರಾಗಿದ್ದು, ಅವರ ಪೋಷಕರು ಮತ್ತು ಇಬ್ಬರು ಸಹೋದರರನ್ನು ಅಗಲಿದ್ದಾರೆ ಎಂದು ತಿಳಿದುಬಂದಿದೆ.

https://youtu.be/8k2Tn8EL0Zo

Advertisement
Click to comment

You must be logged in to post a comment Login

Leave a Reply