Connect with us

    LATEST NEWS

    ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಆಧಾರ್ ಕಡ್ಡಾಯ….!!

    ಉಡುಪಿ ಸೆಪ್ಟೆಂಬರ್ 04: ಕೇರಳ ಭಕ್ತರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನಲೆ ಇದೀಗ ಕೊಲ್ಲೂರು ಶ್ರೀ ಮೂಕಾಂಬಿಕೆ ದರ್ಶನಕ್ಕೆ ಬರುವ ಭಕ್ತರಿಗೆ ಆಧಾರ್ ಕಾರ್ಡ್ ನ್ನು ತರಬೇಕು ಎಂದು ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ತಿಳಿಸಿದ್ದಾರೆ.


    ಕೋವಿಡ್-19 ಹಿನ್ನೆಲೆ ಪ್ರಸ್ತುತ ವಿದ್ಯಾಮಾನಗಳನ್ನು ಪರಿಗಣಿಸಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿಗಳ ಆದೇಶದಂತೆ ಸೆಪ್ಟಂಬರ್ 4ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಈ ನಿಯಮ ಜಾರಿಯಲ್ಲಿರಲಿದೆ. ದೇವಾಲಯ ಪ್ರವೇಶದ್ವಾರದಲ್ಲಿ ದೇವಾಲಯ ಪ್ರವೇಶಿಸುವ ಎಲ್ಲಾ ಭಕ್ತಾದಿಗಳ ಆಧಾರ್ ಕಾರ್ಡ್ ಪರಿಶೀಲಿಸಿ ಹೆಸರು, ಊರು ಹಾಗೂ ಸಂಪರ್ಕ ಸಂಖ್ಯೆಯನ್ನು ದಾಖಲಿಸಲಾಗುತ್ತದೆ.


    ಕೇರಳ ರಾಜ್ಯದಿಂದ ಆಗಮಿಸುವ ಭಕ್ತರು ದೇವಸ್ಥಾನ ಪ್ರವೇಶಿಸುವ 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್- 19 ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿಯನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ. ಅಲ್ಲದೆ ಮೂಕಾಂಬಿಕಾ ಕ್ಷೇತ್ರದಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ಪ್ರಕಟಣೆ
    ತಿಳಿಸಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *