LATEST NEWS
ಕೊರೊನಾ ಇಳಿಮುಖ- ಕೊಲ್ಲೂರು ದೇವಸ್ಥಾನದಲ್ಲಿ ಭಕ್ತರಿಗೆ ಸೇವೆಗಳಿಗೆ ಅವಕಾಶ
ಉಡುಪಿ ಸೆಪ್ಟೆಂಬರ್ 21: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳಲ್ಲಿ ಇಳಿಕೆ ಹಿನ್ನಲೆ , ಜಿಲ್ಲೆಯ ಪ್ರಮುಖ ದೇವಸ್ಥಾನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತರಿಗೆ ಸೇವೆಗೆ ಅವಕಾಶ ಕಲ್ಪಿಸಲಾಗಿದೆ.
ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಭಕ್ತರಿಗೆ ಕೊರೊನಾ ಮಾರ್ಗಸೂಚಿ ಪಾಲಿಸಿಕೊಂಡು, ದರ್ಶನಕ್ಕೆ ಮಾತ್ರ ಅವಕಾಶ ಇತ್ತು. ಸದ್ಯ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ರೇಟ್ ಕಡಿಮೆ ಆದ ಹಿನ್ನೆಲೆಯಲ್ಲಿ ದೇಗುಲದ ಪ್ರಮುಖ ಸೇವೆಯಾದ ಚಂಡಿಕಾಯಾಗ, ಹೂವಿನ ಪೂಜೆ ಸಹಿತ ವಿವಿಧ ಸೇವೆಗಳಿಗೂ ಭಕ್ತರಿಗೆ ಅವಕಾಶ ನೀಡಲಾಗಿದೆ. ಆದರೆ ದೇಗುಲ ಪ್ರವೇಶಕ್ಕೆ ಆದಾರ್ ಕಾರ್ಡ್ ಕಡ್ಡಾಯವಾಗಿದ್ದು, ಕೇರಳದಿಂದ ಆಗಮಿಸುವವರಿಗೆ, 72 ಗಂಟೆ ಒಳಗಡೆಯ ಕೊರೊನಾ ಪಾಸಿಟಿವ್ ರಿಪೋರ್ಟ್ ಕಡ್ಡಾಯವಾಗಿದೆ.
ಸದ್ಯ ಕೇರಳದ ಭಕ್ತರು ಕಡಿಮೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದೇಗುಲದಲ್ಲಿ ಭಕ್ತರ ಸಂಖ್ಯೆಯಲ್ಲಿ ಬಾರೀ ಇಳಿಮುಖವಾಗಿದೆ.