LATEST NEWS
ಕೊಲ್ಲೂರು ದೇವಾಲಯದ ನಿರ್ವಹಣಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ನೇಮಕ ಅಸಿಂಧು – ಹೈಕೋರ್ಟ್ ಆದೇಶ
ಕೊಲ್ಲೂರು ನವೆಂಬರ್ 18: ಉಡುಪಿ ಜಿಲ್ಲೆಯ ಪ್ರಸಿದ್ದ ದೇವಿ ಕ್ಷೇತ್ರ ಕೊಲ್ಲೂರು ಶ್ರೀಮೂಕಾಂಬಿಕಾ ದೇವಾಲಯದ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಅವರ ನೇಮಕವನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದೆ.
ಉಡುಪಿ ಜಿಲ್ಲೆಯ ಗೋಪಾಲಕೃಷ್ಣ ಸೇರಿದಂತೆ ಮೂವರು ಚಂದ್ರಶೇಖರ್ ಶೆಟ್ಟಿ ಅವರ ಆಯ್ಕೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನಲೆ ವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಕೃಷ್ಣ ಎಸ್ ದೀಕ್ಷಿತ್ ಏಪ್ರಿಲ್ 26, 2021 ರ ಪ್ರಕ್ರಿಯೆಗಳನ್ನು ರದ್ದುಗೊಳಿಸಿದ್ದಾರೆ.
ಗಣೇಶ್ ಕಿಣಿ ಹಾಗೂ ಚಂದ್ರಶೇಖರ ಶೆಟ್ಟಿ ಅವರು ಮಾರ್ಚ್24 ಹಾಗೂ ಏಪ್ರಿಲ್ 15 2021 ರಲ್ಲಿ ಸಮಿತಿ ಸದಸ್ಯರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಹೊರತಾಗಿಯೂ ಅವರನ್ನು ಹಾಲಿ ಸಮಿತಿ ಸದಸ್ಯರೆಂದು ಪರಿಗಣಿಸಿ ಏಪ್ರಿಲ್ 26 ರಂದು ನಡೆದ ಸಭೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದ್ದು ಈ ಸಭೆಯಲ್ಲಿ ಶೆಟ್ಟಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಲಾಗಿತ್ತು.
ಸಮಿತಿಯ ಸದಸ್ಯರೇ ಅಲ್ಲದೇ ಇದ್ದವರು ಸಭೆಯಲ್ಲಿ ಭಾಗವಹಿಸಲು ಸಾಧ್ಯವಿಲ್ಲ. ಆದ್ದರಿಂದ ಸಮಿತಿಯ ಸದಸ್ಯರಲ್ಲದೇ ಇದ್ದವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವಂತಿಲ್ಲ ಎಂದು ಕೋರ್ಟ್ ಹೇಳಿದೆ.