Connect with us

  LATEST NEWS

  ನಿಮ್ಮ ಮುಂದಿನ ಜನಾಂಗ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರಬೇಕೆಂದರೆ “ಕೇರಳ ಸ್ಟೋರಿ” ನೋಡಿ…..!!

  ಉಡುಪಿ ಮೇ 15: ನಿಮ್ಮ ಮುಂದಿನ ಜನಾಂಗ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರಬೇಕೆಂದರೆ ಕೇರಳ ಸ್ಟೋರಿ ನೋಡಿ ಎಂಬ ಬ್ಯಾನರ್ ವೊಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆವರಣದಲ್ಲಿ ಹಾಕಲಾಗಿದೆ.


  ದಿ ಕೇರಳ ಸ್ಟೋರಿ ಸಿನೆಮಾ ಬಿಡುಗಡೆಯಾಗಿ ಇದೀಗ 100 ಕೋಟಿ ಹಣ ಗಳಿಸಿ ಚಿತ್ರ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಇದೀಗ ‘ದಿ ಕೇರಳ ಸ್ಟೋರಿ’ ಚಿತ್ರದ ಬಗ್ಗೆ ಕೊಲ್ಲೂರಿನಲ್ಲಿ ಪ್ರಚಾರ ಮಾಡಲಾಗುತ್ತಿದೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆವರಣದಲ್ಲಿ ಈ ಚಿತ್ರಕ್ಕೆ ಸಂಬಂಧಿಸಿದ ಬ್ಯಾನರ್​ ಇರಿಸಲಾಗಿದೆ. ಇಂಗ್ಲಿಷ್​ ಮತ್ತು ಮಲಯಾಳಂ ಭಾಷೆಯಲ್ಲಿ ಬರೆದಿರುವ ಬ್ಯಾನರ್​ಗಳನ್ನು ಇರಿಸಲಾಗಿದ್ದು, ಕೊಲ್ಲೂರಿಗೆ ಬರುವ ಪ್ರವಾಸಿಗರ ಗಮನ ಸೆಳೆಯಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲೂ ಈ ಬ್ಯಾನರ್​ಗಳು ವೈರಲ್​ ಆಗಿವೆ.

  ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಪ್ರತಿದಿನ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಅದರಲ್ಲೂ ಕೇರಳದಿಂದ ಅನೇಕರು ಬಂದು ದೇವಿಯ ದರ್ಶನ ಪಡೆಯುತ್ತಾರೆ. ಮಲಯಾಳಿಗಳನ್ನೇ ಉದ್ದೇಶಿಸಿ ಈ ಬ್ಯಾನರ್​ಗಳನ್ನು ಬರೆಸಲಾಗಿದೆ. ‘ನಿಮ್ಮ ಮುಂದಿನ ಜನಾಂಗ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರಬೇಕೆಂದರೆ ಕೇರಳ ಸ್ಟೋರಿ ನೋಡಿ’ ಎಂದು ಇದರಲ್ಲಿ ಬರೆಯಲಾಗಿದೆ. ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಮೂಕಾಂಬಿಕಾ ದೇವಾಲಯದ ದ್ವಾರ ಹಾಗೂ ಆವರಣದಲ್ಲಿ ಬ್ಯಾನರ್ ಅಳವಡಿಸಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply