Connect with us

DAKSHINA KANNADA

ಕಾಲೇಜಿನ ಸಣ್ಣ ವಿಚಾರವನ್ನು ಬಾಹ್ಯ ಶಕ್ತಿಗಳು ದೊಡ್ಡದಾಗಿ ಬೆಳೆಸಿದೆ- ಪ್ರಾಂಶುಪಾಲ ಸುರೇಶ್ ಭಟ್

ಪುತ್ತೂರು ನವೆಂಬರ್ 27: ಪುತ್ತೂರು ಕೊಂಬೆಟ್ಟು ಸರಕಾರಿ ಪಿಯು ಕಾಲೇಜಿನಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳನ್ನು ಸಮಾನ ದೃಷ್ಟಿಯಿಂದ ನೋಡಲಾಗುತ್ತಿದ್ದು, ಯಾರಲ್ಲೂ ತಾರತಮ್ಯ ನಡೆಸಲಾಗುತ್ತಿಲ್ಲ ಎಂದು ಕಾಲೇಜು ಪ್ರಾಂಶುಪಾಲ ಸುರೇಶ್ ಭಟ್ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ.


ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಒಂದು ವಾರದ ಹಿಂದೆ ಕಾಲೇಜಿನಲ್ಲಿ ನಡೆದ ಕ್ಷುಲ್ಲಕ ಕಾರಣವನ್ನು ಹೊರಗಿನ ಕೆಲವು ಶಕ್ತಿಗಳು ದೊಡ್ಡದಾಗಿ ಬಿಂಬಿಸುವ ಮೂಲಕ ವಿದ್ಯಾರ್ಥಿಗಳ ಮನಸ್ಸಿಗೆ‌ ಕೆಟ್ಟ ವಿಚಾರಗಳನ್ನು ತುಂಬಿಸುವ ಕಾರ್ಯ ನಡೆದಿದೆ ಎಂದರು.

ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಬಂದರೂ ಅದನ್ನು ಕಾಲೇಜಿನ ಉಪನ್ಯಾಸಕರ ಗಮನಕ್ಕೆ ತರುವ ಬದಲು ಹೊರಗಿನ ವ್ಯಕ್ತಿಗಳಿಗೆ ನೀಡಿದ ಪರಿಣಾಮ ಇದಾಗಿದೆ ಎಂದ ಅವರು ಮುಂದಿನ ದಿನಗಳಲ್ಲಿ ಕಾಲೇಜಿನಲ್ಲಿ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮ ಜರುಗಿಸುವುದಾಗಿ ಹೇಳಿದರು.

Advertisement
Click to comment

You must be logged in to post a comment Login

Leave a Reply