ಮಂಗಳೂರು, ಫೆಬ್ರವರಿ 08: ನಿಷೇಧಿತ ಎಮ್ ಡಿಎಮ್ ಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಭೇದಿಸಿದ ಕೊಣಾಜೆ ಠಾಣೆಯ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಶ್ರೀರಂಗಪಟ್ಟಣ ಹುಲಿಕೆರೆ ನಿವಾಸಿ ಜೋರ್ಡನ್ (21 ) ಎಂದು ಗುರುತಿಸಲಾಗಿದೆ. ಈತ ಕೊಣಾಜೆಯ ಬಾಳೆಪುಣಿ ಗ್ರಾಮದ ನವಗ್ರಾಮ ಸೈಟ್ ನಾರ್ಯಗುತ್ತು ಗುಡ್ಡ ಪ್ರದೇಶದಲ್ಲಿ ನಿಷೇಧಿತ ಎಮ್ ಡಿಎಮ್ ಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಆರೋಪಿಯಿಂದ 55 ಗ್ರಾಂ ಎಮ್ ಡಿಎಮ್ ಎ ಮಾದಕ ವಸ್ತು, ಒಂದು ಮೊಬೈಲ್ ಫೋನ್, ಡಿಜಿಟಲ್ ತೂಕದ ಮಾಪನ ಯಂತ್ರ ಸಹಿತ ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ,ತನಿಖೆ ಮುಂದುವರೆದಿದೆ.

Share Information