DAKSHINA KANNADA
ಕರ್ತವ್ಯದಲ್ಲಿರುವಾಗಲೇ ಕೊಣಾಜೆ ಹೆಡ್ ಕಾನ್ಸ್‌ಸ್ಟೇಬಲ್ ಹೃದಯಾಘಾತದಿಂದ ಸಾವು

ಮಂಗಳೂರು, ಆಗಸ್ಟ್ 06: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವಿಭಾಗದ ಹೆಡ್ ಕಾನ್ಸ್ ಸ್ಟೇಬಲ್ ಜಗನ್ನಾಥ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಗನ್ನಾಥ (44) ಇಂದು ಬೆಳಗ್ಗೆ ಕರ್ತವ್ಯದಲ್ಲಿರುವಾಗಲೇ ಅಸ್ವಸ್ಥಗೊಂಡಿದ್ದರು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದರು.

ಜಗನ್ನಾಥ ಮೂಲತಃ ಪುತ್ತೂರು ತಾಲೂಕಿನ ಸವಣೂರು ಗ್ರಾಮದವರಾಗಿದ್ದು, ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.