Connect with us

    LATEST NEWS

    ಕೊಂಕಣ ರೈಲ್ವೆಯಲ್ಲಿ ಕಳ್ಳತನ ಪ್ರಕರಣ ಗಂಭೀರವಾಗಿ ಪರಿಗಣಿಸಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

    ಉಡುಪಿ, ಜನವರಿ 13 : ಕರಾವಳಿ ಜಿಲ್ಲೆಗಳನ್ನು ಹಾದು ಹೋಗುವ ಕೊಂಕಣ ರೈಲ್ವೆ ವ್ಯಾಪ್ತಿಯ ರೈಲುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ರೈಲ್ವೆ ಇಲಾಖೆ ಈ ಬಗ್ಗೆ ಅತ್ಯಂತ ಗಂಭೀರವಾಗಿ ಪರಿಗಣಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಸೂಚನೆ ನೀಡಿದರು.

    ನಗರದ ಜಿಲ್ಲಾ ಪಂಚಾಯತ್‍ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃಧ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊಂಕಣ ರೈಲ್ವೆ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ರೈಲುಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಈ ಬಗ್ಗೆ ಹೆಚ್ಚಿನ ದೂರುಗಳು ದಾಖಲಾಗುತ್ತಿವೆ. ಸಾರ್ವಜನಿಕರು ಈ ಕುರಿತು ತೀವ್ರವಾಗಿ ಆರೋಪಗಳನ್ನು ಮಾಡುತ್ತಿದ್ದು, ರೈಲ್ವೆ ಇಲಾಖೆಯ ಅಧಿಕಾರಿಗಳು ಕಳ್ಳತನ ತಡೆಯಲು ಕೂಡಲೇ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು. ರೈಲ್ವೆ ಬೋಗಿಗಳಲ್ಲಿ ಸಿಸಿಟಿವಿ ಅಳವಡಿಕೆ,  ಪ್ರಯಾಣಿಕರಿಗೆ ಲಾಕರ್‍ಗಳ ವ್ಯವಸ್ಥೆ ಮಾಡಬೇಕು. ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಸಿಸಿಟಿವಿ ಗಳನ್ನು ಅಳವಡಿಸುವಂತೆ ಸೂಚನೆ ನೀಡಿದ ಕೇಂದ್ರ ಸಚಿವರು, ಈ ಬಗ್ಗೆ ದೆಹಲಿಯಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಕೂಡಾ ಚರ್ಚಿಸುವುದಾಗಿ ತಿಳಿಸಿದರು.

    ರೈಲ್ವೆ ನಿಲ್ದಾಣಕ್ಕೆ ತೆರಳುವ ರಸ್ತೆಯ ದುರಸ್ತಿ ಕುರಿತಂತೆ ರೈಲ್ವೆ, ನಗರಸಭೆ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸ್ಥಳ ತನಿಖೆ ನಡೆಸಿ, ಶೀಘ್ರದಲ್ಲಿ ಪ್ರಯಾಣಿಕರಿಗೆ ಉತ್ತಮ ರಸ್ತೆ ಸೌಲಭ್ಯ ಒದಗಿಸುವಂತೆ ಹಾಗೂ ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.  ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಈಗಾಗಲೇ ಗುರುತಿಸಲಾಗಿರುವ ಬ್ಲಾಕ್ ಸ್ಪಾಟ್‍ಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಮತ್ತು ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚಿಸಿದ ಸಚಿವರು, ಕಟಪಾಡಿ, ಉಡುಪಿ ಮತ್ತು ಪಡುಬಿದ್ರಿ ಜಂಕ್ಷನ್‍ಗಳಲ್ಲಿ ಅಪಘಾತಗಳನ್ನು ತಡೆಯಲು ಮತ್ತು ವಾಹನ ದಟ್ಟಣೆಯನ್ನು ನಿಯಂತ್ರಿಸಲು ಸಿಗ್ನಲ್ ಅಳವಡಿಸಬೇಕು,  ಕರಾವಳಿ- ಮಲ್ಪೆ ರಸ್ತೆ ಕಾಮಗಾರಿಯನ್ನು ಶೀಘ್ರದಲ್ಲಿ ಆರಂಭಿಸುವಂತೆ ಹಾಗೂ ಪರ್ಕಳದಲ್ಲಿ ತ್ವರಿತಗತಿಯಲ್ಲಿ ಕಾಮಗಾರಿ ಕೈಗೊಳ್ಳುವಂತೆ ಮತ್ತು ಯಾವುದೇ ಕಾನೂನು ತೊಡಕುಗಳಿದ್ದಲ್ಲಿ  ಶೀಘ್ರದಲ್ಲಿ ಬಗೆಹರಿಸಿಕೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

     

    Share Information
    Advertisement
    Click to comment

    Leave a Reply

    Your email address will not be published. Required fields are marked *