DAKSHINA KANNADA
ಭಾರತೀಯ ರೈಲ್ವೆಯೊಂದಿಗೆ ಕೊಂಕಣ್ ರೈಲ್ವೆ ವಿಲೀನ – ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ
ಬೆಂಗಳೂರು, ಸೆಪ್ಟೆಂಬರ್ 17: ಕೊಂಕಣ್ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಿಗೊಳಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದ್ದು, ಈ ಕುರಿತಂತೆ ಸಂಬಂಧಪಟ್ಟ ರಾಜ್ಯಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ರೈಲ್ವೆ ಖಾತೆಯ ರಾಜ್ಯ ಸಚಿವ ವಿ ಸೋಮಣ್ಣ ಹೇಳಿದ್ದಾರೆ.
ಸೋಮವಾರ ಬೆಳಗಾವಿಯಲ್ಲಿ ಮಾತನಾಡಿದ ಅವರು ಕೊಂಕಣ ರೈಲ್ವೆ ಜಾಲವು ಕೇರಳದಿಂದ ಮಹಾರಾಷ್ಟ್ರದವರೆಗೆ ವ್ಯಾಪಿಸಿದೆ. ಕರ್ನಾಟಕ ರಾಜ್ಯವೊಂದರಲ್ಲೇ ಒಟ್ಟು 742 ಕಿ.ಮೀ. ಕ್ರಮಿಸುತ್ತದೆ ಎಂದು ಸೋಮಣ್ಣ ತಿಳಿಸಿದರು.
ಪ್ರಯಾಣಿಕರಿಗೆ ಇನ್ನಷ್ಟು ಉತ್ತಮ ಸೇವೆಗಳನ್ನು ಒದಗಿಸುವ ಅಗತ್ಯವಿದೆ. ಹೀಗಾಗಿ ಭಾರತೀಯ ರೈಲ್ವೇಯೊಂದಿಗೆ ವಿಲೀನಗೊಳಿಸುವ ಬಗ್ಗೆ ಪರಿಗಣಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ವಿಲೀನ ವಿಚಾರವಾಗಿ ನಾವು ಕರ್ನಾಟಕ, ಕೇರಳ ಮತ್ತು ಗೋವಾ ಸರ್ಕಾರಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಮಹಾರಾಷ್ಟ್ರಕ್ಕೆ ಮನವರಿಕೆ ಮಾಡಿಕೊಟ್ಟ ನಂತರ, ವಿಲೀನ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
You must be logged in to post a comment Login