Connect with us

KARNATAKA

ಕೊರಗಜ್ಜ ಸಿನೆಮಾದ ಚಿತ್ರೀಕರಣದ ವೇಳೆ ಕಿಡಿಗೇಡಿಗಳಿಂದ ದಾಂಧಲೆ..!!

ಚಿಕ್ಕಮಗಳೂರು ಅಕ್ಟೋಬರ್ 28: ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾ ಶೂಟಿಂಗ್ ಪ್ರಾರಂಭದಿಂದಲೇ ಒಂದಲ್ಲ ಒಂದು ವಿವಾದಗಳಿಗೆ ಒಳಗಾಗುತ್ತಲೇ ಇದೆ. ಈ ನಡುವೆ ಕುದುರೆ ಮುಖ ಸಮೀಪದ ಕಳಸದಲ್ಲಿ ‘ಕೊರಗಜ್ಜ’ ಚಿತ್ರದ ಹಾಡಿನ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ.


ಈ ಬಗ್ಗೆ ಮಾಹಿತಿ ನೀಡಿರುವ ನಿರ್ದೇಶಕ ಸುಧೀರ್ ಅತ್ತಾವರ್ ಅಕ್ಟೋಬರ್ 27ರಂದು ಶೂಟ್ ನಡೆಯುತ್ತಿತ್ತು. ಬೆಳಿಗ್ಗೆ ಶೂಟ್ ಮಾಡಿದೆವು. ಮಧ್ಯಾಹ್ನ ಊಟದ ನಂತರ ಕೆಲವರು ತಲ್ವಾರ್ ಹಿಡಿದು ಸೆಟ್​ಗೆ ಬಂದರು. ಅವರು ಆವೇಶದಲ್ಲಿ ಇದ್ದರು. ನಂತರ ಮತ್ತೊಂದು ತಂಡದವರು ಸೆಟ್​ನ ಪರಿಶೀಲಿಸಿದ್ದಾರೆ. ಆ ಬಳಿಕ ಮೂರನೆ ತಂಡ ಕೂಡ ಬಂತು. ಅಲ್ಲಿ ಬಿಜೆಪಿ ನಾಯಕರಿದ್ದರು ಎಂದಿದ್ದಾರೆ. ನಾನು ಪೊಲೀಸರಿಗೆ ದೂರು ಕೊಟ್ಟಿಲ್ಲ. ಗಣೇಶ ಆಚಾರ್ಯರಂತಹ ಖ್ಯಾತ ಕೊರಿಯೋಗ್ರಾಫರ್​ ಬಂದಿದ್ದ ವೇಳೆ ಹೀಗಾಯಿತಲ್ಲ ಎಂದು ಬಹಳ ನೋವಾಯಿತು” ಎಂದು ಹೇಳಿದರು.


ಖ್ಯಾತ ಬಾಲಿವುಡ್ ಕೊರಿಯೋಗ್ರಾಫರ್ ಗಣೇಶ್ ಆಚಾರ್ಯ, ನಟಿ ಶುಭಾ ಪೂಂಜ ಮೊದಲಾದವರು ಹಾಡಿನ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಅದೃಷ್ಟವಶಾತ್ ಯಾರಿಗೂ ತೊಂದರೆ ಆಗಿಲ್ಲ. ಆದರೆ, ಸಿನಿಮಾ ಸೆಟ್ ನಾಶವಾಗಿದೆ.

Share Information
Advertisement
Click to comment

You must be logged in to post a comment Login

Leave a Reply