Connect with us

DAKSHINA KANNADA

ಮದುವೆಯ ದಿನ ಕೊರಗಜ್ಜನ ವೇಷಭೂಷಣ ಧರಿಸಿ ಕುಣಿದ ಮದುಮಗ – ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು ಜನವರಿ 07:ಮುಸ್ಲಿಂ ಸಮುದಾಯದ ಮದುವೆ ಕಾರ್ಯಕ್ರಮದಲ್ಲಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ವೇಷಭೂಷಣ ಧರಿಸಿ ಅವಮಾನ ಮಾಡಿರುವ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಮುಸ್ಲಿಂ ಸಮುದಾಯದವರೇ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.


ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉಪ್ಪಳದ ಯುವಕನ ಜೊತೆ ನಡೆದಿದ್ದ ಕೊಳ್ನಾಡು ಗ್ರಾಮದ ಯುವತಿಯೊಬ್ಬರ ಜೊತೆ ಮದುವೆ ಕಾರ್ಯಕ್ರಮ ನಡೆದಿದ್ದು, ವಧುವಿನ‌ ಮನೆಗೆ ರಾತ್ರಿ ಆಗಮಿಸಿದ್ದ ವರ, ಕೊರಗಜ್ಜನ ವೇಷ ಭೂಷಣ ಧರಿಸಿ ಆಗಮಿಸಿದ್ದ, ತಲೆಗೆ ಅಡಿಕೆ ಹಾಳೆ ಟೋಪಿ,ಮುಖಕ್ಕೆ ಕಪ್ಪು ಬಣ್ಣ ಹಚ್ಚಿಕೊಂಡು ವಧುವಿನ ಮನೆ ಮುಂದಿನ ರಸ್ತೆಯಲ್ಲಿ ವರನ ಗೆಳೆಯರು ಹಾಡು ಹೇಳಿ ಕುಣಿಯುತ್ತಾ ಬಂದಿದ್ದಾರೆ. ಈ ಘಟನೆಯ ವಿಡಿಯೋವನ್ನು ತೆಗೆದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗಿದೆ.


ಇದೀಗ ಕೊರಗಜ್ಜನಿಗೆ ಅವಮಾನ ಮಾಡಿ ಹುಚ್ಚಾಟ ಮಾಡಿದ್ದ ಯುವಕರ ವಿರುದ್ದ ಆಕ್ರೋಶ ವ್ಯಕ್ತವಾಗಿದ್ದು. ಕೃತ್ಯವನ್ನು ಖಂಡಿಸಿ ಮುಸ್ಲಿಂ ಸಮುದಾಯದ ವ್ಯಕ್ತಿ ಎನ್ನಲಾದವರ ಆಡಿಯೋ ವೈರಲ್ ಆಗಿದೆ. ಈ ಕೃತ್ಯದಿಂದ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯುಂಟಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಹುಚ್ಚಾಟ ಪ್ರದರ್ಶಿಸಿದವರ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಲಾಗಿದೆ.

Advertisement
Click to comment

You must be logged in to post a comment Login

Leave a Reply