LATEST NEWS
ಕೋಟದಲ್ಲಿ ಗಂಡ ಹೆಂಡತಿಯ ಜಗಳ ಕೊಲೆಯಲ್ಲಿ ಅಂತ್ಯ

ಉಡುಪಿ ಅಗಸ್ಟ್ 23: 8 ತಿಂಗಳ ಹಿಂದೆ ಮದುವೆಯಾದ ಜೋಡಿಯ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಸಾಲಿಗ್ರಾಮದ ಕಾರ್ಕಡದಲ್ಲಿ ಸಂಭವಿಸಿದೆ. ಬೆಳ್ಳಂಬೆಳಿಗ್ಗೆಯೇ ಗಂಡ ಹೆಂಡತಿ ನಡುವೆ ಜಗಳ ಉಂಟಾಗಿದ್ದು ಇದು ತಾರಕಕ್ಕೇರಿ ಪತಿ ಪತ್ನಿಗೆ ಹೊಡೆದ ಪರಿಣಾಮ, ಪತ್ನಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಆರೋಪಿಯನ್ನು ಸಾಸ್ತಾನ ಗುಂಡ್ಮಿ ನಿವಾಸಿ ಕಿರಣ್ ಉಪಾಧ್ಯಾಯ(30) ಎಂದು ಗುರುತಿಸಲಾಗಿದೆ. ಆತನ ಪತ್ನಿ ಜಯಶ್ರೀ(28) ಮೃತ ದುರ್ದೈವಿ.
8 ತಿಂಗಳ ಹಿಂದಷ್ಟೇ ಕಿರಣ ಉಪಾಧ್ಯಾಯ ಹಾಗೂ ಜಯಶ್ರೀ ವಿವಾಹವಾಗಿತ್ತೆನ್ನಲಾಗಿದೆ. ಕಳೆದ ಮೂರು ತಿಂಗಳಿನಿಂದ ಸಾಲಿಗ್ರಾಮ ಕಾರ್ಕಡ ಪಡುವಳಿಯ ಮನೆಯಲ್ಲಿ ಬಾಡಿಗೆಯಲ್ಲಿ ವಾಸ ಮಾಡಿಕೊಂಡಿದ್ದರು. ಸ್ಥಳೀಯರು ಗಂಡ ಹೆಂಡತಿ ನಡುವೆ ಜಗಳ ಉಂಟಾಗಿ, ಇದರಿಂದಲೇ ಪತಿ ಪತ್ನಿಗೆ ಹಲ್ಲೆ ನಡೆಸಿದ್ದಾಗ ಪತ್ನಿ ಜಯಶ್ರೀ ತಲೆಗೆ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎನ್ನುತ್ತಿದ್ದಾರೆ.

ಜಯಶ್ರೀ ಮೃತ ದೇಹವನ್ನು ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಆರೋಪಿ ಆಕೆಯ ಪತಿ ಕಿರಣ್ ಉಪಾಧ್ಯ ಗುಂಡ್ಮಿ(44) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆ ನಡೆಸುತ್ತಿದ್ದಾರೆ.