KARNATAKA
ರಾಜ್ಯದಲ್ಲಿ ಹಿಂದೂ ಸಂಘಟನೆ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಹಾಕಲಾಗಿದ್ದ ಸುಳ್ಳು ಪ್ರಕರಣಗಳನ್ನು ರದ್ದುಗೊಳಿಸಲು ಕೋಟ ಮನವಿ

ಬೆಂಗಳೂರು ಅಗಸ್ಟ್ 09: ರಾಜ್ಯದಲ್ಲಿ ಹಿಂದೂ ಸಂಘಟನೆ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಹಾಕಲಾಗಿದ್ದ ಸುಳ್ಳು ಪ್ರಕರಣಗಳನ್ನು ರದ್ದುಗೊಳಿಸಬೇಕೆಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಗೃಹ ಸಚಿವರಾದ ಆರಗ ಜ್ನಾನೇಂದ್ರರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಹಿಂದಿನ ಕಾಂಗ್ರೇಸ್ ಸರಕಾರ ಅನ್ಯ ಸಂಘಟನೆಗಳ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ರದ್ದುಗೊಳಿಸಿತ್ತು. ಈ ಹಿನ್ನಲೆ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣಗಳು ಹಾಗೆ ಇದ್ದು, ಈ ಹಿಂದೆ ಬಸವರಾಜ್ ಬೊಮ್ಮಾಯಿ ಯವರು ಗೃಹ ಸಚಿವರಾಗಿದ್ದ ಸಂದರ್ಭ ಹಿಂದೂ ಸಂಘಟನೆಗಳ ಮುಖಂಡರು ಮನವಿ ಮಾಡಿದ್ದರು, ಈಗ ಈ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಗೃಹ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಮನವಿಗೆ ಪ್ರತಿಕ್ರಿಯಿಸಿರುವ ಗೃಹಸಚಿವರು ಎಲ್ಲಾ ಜಿಲ್ಲೆಗಳಿಂದ ಈ ಬಗ್ಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.