LATEST NEWS
ಮತಾಂತರ ಆರೋಪ; ಕೋಟ ಪೊಲೀಸ್ ಠಾಣೆ ಎದುರು ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ
ಉಡುಪಿ : ಮನೆಯೊಂದರಲ್ಲಿ ಮತಾಂತರ ಪ್ರಕ್ರಿಯೆ ನಡೆಯುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಕುಂದಾಪುರ ತಾಲೂಕಿನ ಹಳ್ಳಾಡಿ ಎಂಬಲ್ಲಿ ನಡೆದಿದೆ. ಆರೋಪಿಗಳನ್ನು ಬಂಧಿಸುವಂತೆ ಕೋಟ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆದಿದೆ.
ಹಿಂದೂ ಧರ್ಮದಿಂದ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ದಂಪತಿಗಳು ಜನತಾ ಕಾಲೋನಿಯ ಸುಮಾರು 20ಕ್ಕೂ ಹೆಚ್ಚು ಜನರಿಗೆ ಕ್ರೈಸ್ತ ಪ್ರವಚನ ನೀಡುತ್ತಿದ್ದು, ಜನರಿಗೆ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಪ್ರೇರೇಪಣೆ ನಡೆಯುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಆರೋಪಿಸಿದ್ದಾರೆ. ವಿಷಯ ತಿಳಿದ ಜಾಗರಣ ವೇದಿಕೆ ಸದಸ್ಯರು ತತ್‌ಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೇಳು ಮಂದಿಯನ್ನು ವಶಕ್ಕೆ ಪಡೆದರು.
ವಿಷಯ ತಿಳಿಯುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಠಾಣೆಯ ಆವರಣಕ್ಕೆ ಆಗಮಿಸಿ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು ಹಾಗೂ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಕೋಟ ಠಾಣಾಧಿಕಾರಿ ಸಂತೋಷ್ ಬಿ.ಪಿ.ಯವರು ಜಾಗರಣ ವೇದಿಕೆ ಮುಖಂಡರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದರು. ಅನಂತರ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಜ್ಯೋತಿ, ಪ್ರಕಾಶ್, ಮನೋಹರ್, ರವಿ ಎನ್ನುವವರ ವಿರುದ್ಧ ಸ್ಥಳೀಯರು ದೂರು ದಾಖಲಿಸಿದ್ದಾರೆ.