LATEST NEWS
ಯಾವುದೇ ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ

ಮಂಗಳೂರು ಜುಲೈ 29: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರ ವರ್ಗಾವಣೆಗೆ ರಾಜ್ಯ ಸರಕಾರದ ವಿರುದ್ದ ಕಿಡಿಕಾರಿದ್ದ ಮಾಜಿ ಸಚಿವ ಯು.ಟಿ ಖಾದರ್ ವಿರುದ್ದ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಡಳಿತಾತ್ಮಕ ದೃಷ್ಟಿಯಿಂದ ಸರಕಾರ ಮಾಡಿದ ವರ್ಗಾವಣೆಯನ್ನು ಖಾದರ್ ರಾಜಕೀಯಗೊಳಿಸಿದ್ದು ದುರದೃಷ್ಟ. ಯಾವುದೇ ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ಎಂದು ತಿರುಗೇಟು ನೀಡಿದ್ದಾರೆ.
ಅಲ್ಲದೆ ಶಾಸಕ ಖಾದರ್ ಕೊರೊನಾದಿಂದ ಮೃತಪಟ್ಟವರ ಅಂತ್ಯ ಸಂಸ್ಕಾರ ಸಂದರ್ಭದಲ್ಲಿ ಕಾನೂನುಗಳನ್ನು ಉಲ್ಲಂಘಿಸಿರುವ ಪ್ರಕರಣದ ಬಗ್ಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಟ್ವೀಟ್ ಮಾಡಿದ್ದು ” ಕರೋನಾ ನಿಯಂತ್ರಣಕ್ಕೆ ಪ್ರತಿಪಕ್ಷಗಳ ಸಹಕಾರ ಜಿಲ್ಲಾಡಳಿತ ಕೋರಿದೆ. ದುರಾದೃಷ್ಟಕ್ಕೆ, ಶವಸಂಸ್ಕಾರದ ಹೆಸರಿನಲ್ಲಿ ನಿಯಮಗಳನ್ನು ಉಲ್ಲಂಘಿಸಿ ಪ್ರಚಾರ ಪಡೆಯುತ್ತಿರುವುದು ವಿಪಕ್ಷದ ಜನಪ್ರತಿನಿಧಿಗಳಿಗೆ ಶೋಭೆಯಲ್ಲ ” ಎಂದಿದ್ದಾರೆ.

ಸದ್ಯ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರ ವರ್ಗಾವಣೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.