Connect with us

LATEST NEWS

ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

ಕೋಟ ಜೂನ್ 30 : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್‍ತಿ (97) ವಯೋಸಹಜ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.


ಇವರು ಉತ್ತಮ ಕೃಷಿಕರಾಗಿದ್ದರು.ಕೋಟ ಶ್ರೀನಿವಾಸ ಪೂಜಾರಿಯವರು ತಮ್ಮ ರಾಜಕೀಯ ಜೀವನದಲ್ಲಿ ತಾಯಿಯ ಪಾತ್ರ ಮಹತ್ವದಿದೆ ಎಂದು ಯಾವಾಗಲೂ ನೆನಪಿಸಿಕೊಳ್ಳುತ್ತಿದ್ದರು. ಅಲ್ಲದೆ ಯಾವುದೇ ಉತ್ತಮ ಕೆಲಸ ನಿರ್ವಹಿಸುವ ಮೊದಲು ತಾಯಿಯ ಆಶೀರ್ವಾದ ಪಡೆಯುತ್ತಿದ್ದರು.

 

ಚುನಾವಣೆಯಲ್ಲೂ ತಾಯಿಯೊಂದಿಗೆ ಆಗಮಿಸಿ ಮತ ಚಲಾಯಿಸುತ್ತಿದ್ದರು. ಇವರ ಅಗಲುವಿಕೆಗೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಉದ್ಯಮಿ ಆನಂದ ಸಿ. ಕುಂದರ್ ಸಹಿತ ರಾಜ್ಯ, ರಾಷ್ಟ್ರ ಮಟ್ಟದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *